ಮೈಸೂರು: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಜೆಡಿಎಸ್ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜೆಡಿಎಸ್ (JDS) ಮುಖಂಡ ಹನುಮಂತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಮೇಟಗಳ್ಳಿ ಠಾಣೆ ಪೊಲೀಸರು(police) ವಿನೋದ್, ಮೋಹನ್, ಯೋಗ, ಸಂತು, ಆಂಥೋಣಿ, ವೇಣುಗೋಪಾಲ್ ಮತ್ತು ಮಂಜು ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಡಿ. 22ರಂದು ಮೈಸೂರು ಹೊರವಲಯದ ಬೆಲವತ್ತ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಹನುಮಂತು ಕೊಲೆಯಾಗಿತ್ತು. ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಬೈಕ್ ಬೀಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.
57 ವರ್ಷದ ಹನುಮಂತು ಮೈಸೂರಿನ ಬೆಲವತ್ತ ಗ್ರಾಮದ ನಿವಾಸಿ. ಹಲವು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಕೊಲೆಯಾಗಿರುವ ಹನುಮಂತು ಹಾಗೂ ಕಾಂಗ್ರೆಸ್(congress) ಮುಖಂಡ ಮಂಜುನಾಥ್ ಮಧ್ಯೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿತ್ತು. ಈ ವಿಡಿಯೋ ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.