ಬಳ್ಳಾರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಅಘಾತ ಎದುರಾಗಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದ ಮೇರೆಗೆ 36 ಘಟಕಗಳಿಗೆ ಬೀಗ ಹಾಕಲಾಗಿದೆ.
ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಜೀನ್ಸ್ ಘಟಕದಿಂದ ನೀರು ಶುದ್ದೀಕರಿಸದೇ ರಾಸಾಯನಿಕ ಮಿಶ್ರಿತ ನೀರನ್ನು ಯಥಾವತ್ತಾಗಿ ಹರಿ ಬಿಡಲಾಗುತ್ತಿತ್ತು. ಈ ಕುರಿತು ಹಲವು ಬಾರಿ ನೋಟಿಸ್ ನೀಡಿ ಎಚ್ಚರಿಸಲಾಗಿತ್ತು.
ರಾಸಾಯನಿಕ ನೀರು ಸಂಸ್ಕರಿಸದೇ ಬಿಡುವ ಕಾರಣ 36 ಘಟಕಗಳಿಗೆ ನೋಟಿಸ್ ನೀಡಿ ಜೆಸ್ಕಾಂನಿಂದಲೂ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಬಾಗಿಲು ಹಾಕಲಾಗಿದೆ. ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಬಳ್ಳಾರಿ ಜೀನ್ಸ್ ಉದ್ಯಮವನ್ನೇ ನಂಬಿ 2 ಲಕ್ಷಕ್ಕೂ ಅಧಿಕ ಜನ ಕೆಲಸ ಮಾಡುತ್ತಿದ್ದಾರೆ. ಇದೀಗ ಘಟಕಗಳು ಕ್ಲೋಸ್ ಆಗಿದ್ದರಿಂದ ಜೀನ್ಸ್ ವಾಷಿಂಗ್ ಘಟಕಗಳು ಬೀಕೋ ಎನ್ನುತ್ತಿವೆ.
ಇದನ್ನೂ ಓದಿ: ದೆಹಲಿಯ ಕೆಳ ನ್ಯಾಯಾಲಯ, CRPF ಶಾಲೆಗಳಿಗೆ ಬಾಂಬ್ ಬೆದರಿಕೆ!



















