ನಮ್ಮ ರಾಷ್ಟ್ರದಲ್ಲಿ ಗೋ ಪೂಜೆಗೆ ಬಹಳ ಮಹತ್ವವಿದೆ. ಸಂಕ್ರಾಂತಿ ಸಂಭ್ರಮದ ಸಂದರ್ಭದಲ್ಲಿ ಗೋವುಗಳ ಪೂಜೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿರುತ್ತದೆ. ಆದರೆ, ಜಿಹಾದಿ ಮನಸ್ಥಿತಿಯವರು ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದು ಗಿಫ್ಟ್ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.
ದುಷ್ಕರ್ಮಿಗಳು ಹಸುವಿಗೆ ಮನಸಬಂತೆ ಕೊಯ್ದಿರುವ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಇದು ಜಿಹಾದಿ ಮನಸ್ಥಿತಿ. ಪಾಪಿಗಳು ಹಾಲು ಕೊಡುವ ಕೆಚ್ಚಲು ಕೊಯ್ದಿದ್ದಾರೆ. ಹಸುವಿನ ಮಾಲೀಕ ಆರೆಸ್ಸೆಸ್ ಕಾರ್ಯಕರ್ತ. ಸ್ಥಳೀಯ ಪಶು ಆಸ್ಪತ್ರೆ ಉಳಿವಿಗಾಗಿ ಹಸುವಿನ ಮಾಲೀಕರು ಹೋರಾಟ ಮಾಡಿದ್ದರು. ಅಲ್ಲದೇ, ಹಸುಗಳನ್ನು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು.
ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ಎನ್ನುವ ಕಾರಣಕ್ಕೆ ಕಾಲು ಕಟ್ ಮಾಡಿದ್ದಾರೆ. ಕೆಚ್ಚಲಿಗೆ ಹಾನಿ ಮಾಡಿದ್ದಾರೆ. ಕಾಂಗ್ರೆಸ್ ಮಾತೆತ್ತಿದರೆ ದೇವಸ್ಥಾನ, ಹೋಮ ಅಂತಾರೆ. ಆದರೆ, ಈ ರೀತಿ ಸಂಸ್ಕೃತಿ ಹಾಗೂ ಭಾವನೆಗೆ ಧಕ್ಕೆ ಮಾಡುತ್ತಾರೆ. ಹಿಂದೂಗಳನ್ನು ಭಯಭೀತರನ್ನಾಗಿ ಮಾಡುವ ಉದ್ಧೇಶದಿಂದ ಈ ರೀತಿ ಮಾಡಲಾಗುತ್ತಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ, ಕರಾಳ ಸಂಕ್ರಾಂತಿ ಆಚರಣೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಯತ್ಪೋದಕ ಕೃತ್ಯಗಳು ಸಿಸಿಟಿವಿಗಳಲ್ಲಿ ಕಾಣದಂತೆ ಸಿಸಿಟಿವಿಗಳನ್ನು ಹೊಡೆದು ಹಾಕುತ್ತಿದ್ದಾರೆ. ಪಶು ಆಸ್ಪತ್ರೆ ಉಳಿವಿಗಾಗಿ ಹೋರಾಟ ಮಾಡಿದ ಹಸುಗಳ ಮಾಲೀಕರಿಗೆ ಭಯ ಶುರುವಾಗಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ಗೌರವ ಇದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.