ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ (JNCASR Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಒಂದು ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-I ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆ: 01
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 20
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂವಿ ಎಸ್ಸಿ, ಎಂಇ, ಎಂ ಟೆಕ್, ಎಂ ಫಾರ್ಮ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 56 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲಿಗೆ ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಆನ್ ಲೈನ್ ಮೂಲಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವವರು ಮೊದಲಿಗೆ nth.gov.in ಭೇಟಿ ನೀಡಿ ಅಧಿಸೂಚನೆ ಓದಬೇಕು. ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು haldarlab.jnc@gmail.com ಮೇಲ್ ಐಡಿಗೆ ಕಳುಹಿಸಬೇಕು.
ಇದನ್ನೂ ಓದಿ: ನಿಮ್ಹಾನ್ಸ್ ಸಂಸ್ಥೆಯಲ್ಲಿ ಕ್ಷೇತ್ರ ಸಂಪರ್ಕಾಧಿಕಾರಿಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ



















