ಬೆಂಗಳೂರು : ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಕೇಂದ್ರ ಸರ್ಕಾರದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಎಆರ್ ಎಫ್ ಇನ್ಸ್ಟ್ರುಮೆಂಟ್ ಸೈಂಟಿಸ್ಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 31
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಎಚ್.ಡಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 65 ಲಕ್ಷ ರೂಪಾಯಿ ಸಂಬಳದ ಪ್ಯಾಕೇಜ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ icms@jncasr.ac.in ಇ-ಮೇಲ್ ವಿಳಾಸಕ್ಕೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



















