ಬೆಂಗಳೂರು : ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಅದರಲ್ಲೂ ಬೆಂಗಳೂರಿನಲ್ಲೇ ಉದ್ಯೋಗ ಪಡೆಯಬೇಕು ಎಂಬ ಪ್ರಯತ್ನ ಇದೆಯೇ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಇಲ್ಲಿದೆ. ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಕೇಂದ್ರ ಸರ್ಕಾರದ ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಜವಾಹರ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
ಒಟ್ಟು ಹುದ್ದೆ: ವಿವಿಧ
ಅರ್ಜಿ ಸಲ್ಲಿಕೆ ಮಾದರಿ: ಇ-ಮೇಲ್
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಕೋ-ಆರ್ಡಿನೇಟರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 19
ನೇಮಕಾತಿ ಹೊಂದಿದವರಿಗೆ ಮಾಸಿಕ 45 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 65 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ jncasr.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು ನಿಗದಿತ ದಿನಾಂಕದೊಳಗೆ aco@jncasr.ac.in ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಏರ್ ಇಂಡಿಯಾದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ



















