ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದ, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ (NCBS Recruitment 2025) ಪ್ರಾಜೆಕ್ಟ್ ಸೈಂಟಿಸ್ಟ್ I (Project Scientist I) ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಏಪ್ರಿಲ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ನಂತರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಬಯೋಲಾಜಿಕಲ್ ಸೈನ್ಸಸ್ ನಲ್ಲಿ ಪಿಎಚ್.ಡಿ ಅಧ್ಯಯನ ಮಾಡಿದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಕೆಲಸ ಮಾಡಿದ ಅನುಭವ, ಕಾಲಘಟ್ಟಕ್ಕೆ ತಕ್ಕ ಕೌಶಲಗಳನ್ನೂ ನೇಮಕಾತಿಗೆ ಪರಿಗಣಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. ನೇಮಕಗೊಂಡ ಅಭ್ಯರ್ಥಿಗೆ ಮಾಸಿಕ 56 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಹಲವು ಭತ್ಯೆಗಳು ಕೂಡ ಲಭಿಸುತ್ತವೆ. ಡ್ರಗ್ ಟೆಸ್ಟಿಂಗ್, ಲ್ಯಾಬೊರೇಟರಿ ಕೆಲಸ ಸೇರಿ ನೇಮಕಾತಿ ಬಳಿಕ ಹಲವು ಜವಾಬ್ದಾರಿಗಳನ್ನು ನಿಭಾಯಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಅಧಿಕೃತ ವೆಬ್ಸೈಟ್ https://www.ncbs.res.in/ಗೆ ಭೇಟಿ ನೀಡಬೇಕು
- ಪ್ರಾಜೆಕ್ಟ್ ಸೈಂಟಿಸ್ಟ್ I ಹುದ್ದೆಗಳ ಅಧಿಸೂಚನೆಯನ್ನು ಪರಿಶೀಲಿಸಿ
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಬಳಿಕ ಸಲ್ಲಿಸಿ