ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಇಂಧನ ದಕ್ಷತೆ ಬ್ಯೂರೋದಲ್ಲಿ (BEE Recruitment) ನಾಲ್ಕು ಜಂಟಿ ನಿರ್ದೇಶಕರ ಹುದ್ದೆ ಖಾಲಿ ಇದ್ದು, ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 26ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್ 10 ಕೊನೆಯ ದಿನವಾಗಿದೆ. ಆಫ್ ಲೈನ್ ಮೂಲಕವೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಸ್ಪೀಡ್ ಪೋಸ್ಟ್ ಗಡುವು ಮುಗಿಯುವುದರೊಳಗೆ ಮೂಲಕ ಅರ್ಜಿ ಕಳುಹಿಸಬಹುದಾಗಿದೆ.
ನಾಲ್ಕು ಜಂಟಿ ನಿರ್ದೇಶಕರ ಹುದ್ದೆಗಳು ಖಾಲಿ ಇವೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. 18ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ದೆಹಲಿಯಲ್ಲಿರುವ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ನೇರ ನೇಮಕಾತಿ ಮಾಡಲಾಗುತ್ತದೆ. ಮೊದಲಿಗೆ ಸಂದರ್ಶನ ನಡೆಸಲಾಗುತ್ತದೆ. ಇದಾದ ಬಳಿಕವೇ ಫಲಿತಾಂಶ ಪ್ರಕಟಿಸಲಾಗುತ್ತದೆ. ನೇಮಕಾತಿ ಹೊಂದಿದವರಿಗೆ 1.39 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಗ್ರೂಪ್ ಎ ಹುದ್ದೆಯಲ್ಲಿ 5 ವರ್ಷ ಕೆಲಸ ನಿರ್ವಹಿಸಿದ ಅನುಭವ ಇದ್ದವರಿಗೆ ಹೆಚ್ಚಿನ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಂಜಿನಿಯರಿಂಗ್, ಬಿಸಿನೆಸ್ ಮ್ಯಾನೇಜ್ ಮೆಂಟ್, ಆಡಳಿತ ವಿಭಾಗದಲ್ಲಿ ಅಧ್ಯಯನ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಕಾರ್ಯದರ್ಶಿ, ಬ್ಯೂರೋ ಆಫ್ ಎನರ್ಜಿ ಎಫಿಶಿಯೆನ್ಸಿ, 4ನೇ ಮಹಡಿ, ಸೇವಾ ಭವನ್, ಆರ್.ಕೆ.ಪುರಂ, ಸೆಕ್ಟರ್ 1, ನ್ಯೂಡೆಲ್ಲಿ, 110066 ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ https://beeindia.gov.in/ ವೆಬ್ ಸೈಟ್ ಗೆ ಭೇಟಿ ನೀಡಬಹುದು.