ಬೆಂಗಳೂರು: ನಟ ದರ್ಶನ್ (Darshan) ರಾಜಸ್ಥಾನದಲ್ಲಿ ‘ಡೆವಿಲ್’ (Devil) ಚಿತ್ರದ ಚಿತ್ರೀಕರಣದಲ್ಲಿ ಸಾಕಷ್ಟು ಬ್ಯೂಸಿಯಾಗಿದ್ದಾರೆ. ವಿಜಯಲಕ್ಷ್ಮಿ ಕೂಡ ರಾಜಸ್ಥಾನದಲ್ಲಿ ಬೀಡು ಬಿಟ್ಟಿದ್ದಾರೆ.
ರಾಜಸ್ಥಾನದಲ್ಲಿ ಕ್ಲಿಕ್ಕಿಸಿದ ಫೋಟೋಗಳನ್ನು ನಟನ ಪತ್ನಿ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಡಿದ್ದಾರೆ. ಪತಿ ಜೊತೆ ವಿಜಯಲಕ್ಷ್ಮಿ (Vijayalakshmi) ಕೂಡ ರಾಜಸ್ಥಾನಕ್ಕೆ (Rajasthan) ತೆರಳಿರುವ ಸುದ್ದಿ ಕೇಳಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದಲ್ಲಿ ಅದ್ಧೂರಿಯಾಗಿರುವ ಬಂಗಲೆವೊಂದರಲ್ಲಿ ನಿಂತು ದರ್ಶನ್ ಪತ್ನಿ ಫೋಟೋಗೆ ಪೋಸ್ ನೀಡಿದ್ದಾರೆ. ರಾಜಸ್ಥಾನ ಶೆಡ್ಯೂಲ್ ಚಿತ್ರೀಕರಣ ಮುಗಿಸಿ ಏ.4ರಂದು ಬೆಂಗಳೂರಿಗೆ ಪತ್ನಿಯೊಂದಿಗೆ ದರ್ಶನ್ ವಾಪಸ್ಸಾಗಲಿದ್ದಾರೆ. ಈ ಚಿತ್ರದಲ್ಲಿ ರಚನಾ ರೈ, ಶರ್ಮಿಳಾ ಮಂಡ್ರೆ ಸೇರಿದಂತೆ ಹಲವರು ನಟಿಸಿದ್ದಾರೆ. ಮಿಲನಾ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ.