ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮತ್ತೊಂದು ಶಾಕ್ ಎದುರಾಗಿದೆ.
ವಾರ್ಷಿಕ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಿ ನೀಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಈಗ ಪೂರ್ವ ಸಿದ್ಧತಾ ಮತ್ತ ವಾರ್ಷಿಕ ಪರೀಕ್ಷೆಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಮಧ್ಯವಾರ್ಷಿಕ ಪರೀಕ್ಷೆಗೂ ಪ್ರಶ್ನೆ ಪತ್ರಿಕೆ ರೂಪಿಸಿ ಆನ್ ಲೈನ್ ಮೂಲಕ ರವಾನಿಸುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ವರ್ಷ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯ ಮಾದರಿಯಲ್ಲಿಯೇ ಮಂಡಳಿ ಹಂತದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ಶಾಲೆಗಳಿಗೆ ಲಾಗಿನ್ ನೀಡಲು ಮುಂದಾಗಿದೆ. ಪರೀಕ್ಷೆ ನಡೆಸಲು ಪ್ರಶ್ನೆ ಪತ್ರಿಕೆ ಮುದ್ರಣಕ್ಕೆ ಯಾವುದೇ ಅನುದಾನ ಶಾಲೆಗಳಿಗೆ ನೀಡಿಲ್ಲ. ಆದರೆ, ಇದನ್ನು ಶಾಲೆಗಳಿಂದಲೇ ಭರಿಸಬೇಕಾಗಿದೆ.
ಓರ್ವ ವಿದ್ಯಾರ್ಥಿಗೆ 6 ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಿದ್ಧಪಡಿಸಿ ನೀಡಲು ಕನಿಷ್ಠ 50 ರಿಂದ 60 ರೂಪಾಯಿ ಖರ್ಚಾಗುತ್ತದೆ. ಇಲಾಖೆ ಹಣ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.