ನವದೆಹಲಿ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಮುಂಬರುವ ನವೆಂಬರ್ 23ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಸ್ಟೀಸ್ ಸೂರ್ಯಕಾಂತ್ ಅವರನ್ನು ಮುಂದಿನ ಸಿಜೆಐ ಆಗಿ ನೇಮಕ ಮಾಡಿದ್ದಾರೆ. ನ್ಯಾ. ಸೂರ್ಯಕಾಂತ್ ಅವರು ಪ್ರಸ್ತುತ ಸುಪ್ರೀಂಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ.

ನ.24ರಂದು ಜಸ್ಟೀಸ್ ಸೂರ್ಯಕಾಂತ್ ಅವರು ಭಾರತದ 53ನೇ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು, ರಾಷ್ಟ್ರಪತಿಗಳು ಜಸ್ಟೀನ್ ಸೂರ್ಯಕಾಂತ್ ಅವರನ್ನು ಸಿಜೆಐ ಆಗಿ ನೇಮಕ ಮಾಡಿರುವುದನ್ನು ದೃಢಪಡಿಸಿದ್ದಾರೆ.
“ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿಗಳು ಭಾರತದ ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾದ ನ್ಯಾ. ಸೂರ್ಯಕಾಂತ್ ಅವರನ್ನು ನವೆಂಬರ್ 24, 2025ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಆದೇಶ ಹೊರಡಿಸಿದ್ದಾರೆ” ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ತಮ್ಮ ಅಧಿಕೃತ ಎಕ್ಸ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ : ಇದೆಂಥಾ ದುರ್ವಿಧಿ.. ಚಲಿಸುತ್ತಿದ್ದ ಕಾರಿನೊಳಗೆ ಬಂಡೆ ಕಲ್ಲು ಬಿದ್ದು ಮಹಿಳೆ ಸಾವು!



















