ಬೆಂಗಳೂರು : ಆಗಸ್ಟ್ 4 ರಂದು ಲೋಕಾಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಆಗಸ್ಟ್ 5 ರಂದು ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಈಗಾಗಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದರೆ, ರಾಹುಲ್ ಸಮಾವೇಶಕ್ಕೆ ಇನ್ನೂ ಸ್ಥಳ ನಿಗದಿಯಾಗಿಲ್ಲ, ಪ್ರೀಡಂ ಪಾರ್ಕ್ ನಲ್ಲಿ ಸಮಾವೇಶ ಬೇಡ ಎಂದು ಕಾಂಗ್ರೇಸ್ ಮುಖಂಡರು ವಾದ ಮಂಡಿಸಿದ್ದಾರೆ. ಆದ್ದರಿಂದ ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆ ಅಪೂರ್ಣವಾಗಿದ್ದು, ಇಂದು ಮತ್ತೆ ಡಿಸಿಎಂ ಡಿಕೆ ಶಿವಕುಮಾರ್, ಸುರ್ಜೆವಾಲಾ, ವೇಣುಗೋಪಾಲ್ ಕೆಪಿಸಿಸಿಯಲ್ಲಿ ಸಭೆ ನಡೆಸಲಿದ್ದಾರೆ. ಇಂದೇ ಸಾಮಾವೇಶಕ್ಕೆ ಸ್ಥಳ ಫೈನಲ್ ಮಾಡುವ ನಿರೀಕ್ಷೆ ಇದೆ.