ಕೊಡಗು: ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಕುಶಾಲನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ದ ಕಾನೂನು ಹೋರಾಟ ನಡೆಸದಂತೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿದ್ದಾರೆ.
ವಿನಯ್ ಸೋಮಯ್ಯ ಅವರ ಪತ್ನಿಯ ತಂದೆ ಹಾಗೂ ವಿನಯ್ ಸಹೋದರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಕಾನೂನು ಹೋರಾಟ ನಡೆಸಬಾರದು. ನಡೆಸಿದರೆ ವಿನಯ್ ಗೆ ಬಂದ ಗತಿಯೇ ಬರಲಿದೆ ಎಂದು ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾರೆ.
ಕೆಲವು ದಿನಗಳಿಂದ ಅನಾಮಿಕ ವ್ಯಕ್ತಿಗಳು ದೂರವಾಣಿ ಕರೆ ಮಾಡಿ ಕಾನೂನು ಹೋರಾಟ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ. ಡೆತ್ ನೋಟ್ ನಲ್ಲಿ ಶಾಸಕರ ಹೆಸರು ದಾಖಲಾಗಿಲ್ಲ ಮತ್ತು ಎ1 ಆರೋಪಿ ತೇನಿರಾ ಮೈನಾ ಬಂಧನವಾಗಿಲ್ಲ ಎಂದು ಆರೋಪಿಸಿದ್ದಾರೆ.



















