ತುಮಕೂರು: ದೇಶದಾದ್ಯಂತ 79ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಸ್ವಕ್ಷೇತ್ರ ಮಧುಗಿರಿಯಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಧ್ವಜಾರೋಹಣ ನೆರೆವೇರಿಸಿದ್ದು, ತಾಲೂಕು ಆಡಳಿತ ಹಾಗೂ ಸ್ಥಳೀಯ ಮುಖಂಡರು ಸಾಥ್ ನೀಡಿದ್ದಾರೆ.
ಇತ್ತ ತುಮಕೂರಿನ ಸಿದ್ದಗಂಗಾ ಮಠದಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಧ್ವಜಾರೋಹಣ ನೆರವೇರಿಸಿದ್ದಾರೆ.
ಸ್ವತಂತ್ರ ದಿನಾಚರಣೆ ಅಂಗವಾಗಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದಿಗೆಗೆ ವಿಶೇಷ ಅಲಂಕಾರ ಮಾಡಿದ್ದು, ಶಿವಕುಮಾರ ಸ್ವಾಮೀಜಿಯ ಗದ್ದಿಗೆ ಮುಂಬಾಗದಲ್ಲಿ ಭಾರತ ನಕಾಶೆಯನ್ನು ಚಿತ್ರಿಸಲಾಗಿದೆ.
ಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀ ಉದ್ಯಾನೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಸಿದ್ದಗಂಗಾ ಮಠದಲ್ಲಿ ಮಕ್ಕಳ ಕಲರವ ತುಂಬಿತ್ತು.
ಕಾರ್ಯಕ್ರಮದಲ್ಲಿ ಸಿದ್ದಲಿಂಗ ಶ್ರೀ, ನಗರ ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ , ಎಸ್ ಪಿ ಅಶೋಕ್ ವೆಂಕಟ್, ಸಿಇಒ ಪ್ರಭು, ತುಮಕೂರು ತಾಸಿಲ್ದಾರ್ ರಾಜೇಶ್ವರಿ, ಎಸಿನಹಿದಾ ಝಮ್ ಝಮ್ ಸೇರಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.



















