ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಗುರುವಾರ ತಮ್ಮ ವಿರುದ್ಧ ಹನಿಟ್ರ್ಯಾಪ್ ಪ್ರಕರಣಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ.
ಸದ್ಯ ಅವರು ಜಿಲ್ಲಾ ಪ್ರವಾಸಗಳಲ್ಲಿದ್ದು, ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿ ದೂರು ನೀಡಲಿದ್ದಾರೆ. ಇತ್ತೀಚೆಗೆ ವಿಧಾನಸೌಧದಲ್ಲಿ ಸ್ವತಃ ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಆರೋಪಿಸಿದ್ದರು. ಈ ವಿಷಯ ಬಿಜೆಪಿ ಹಾಗೂ ಕಾಂಗ್ರೆಸ್ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ತನಿಖೆಗೆ ವಹಿಸುವಂತೆ ಆಗ್ರಹ ಕೇಳಿ ಬರುತ್ತಿದೆ.