ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯದಲ್ಲಿಯೂ ಕಾಂಗ್ರೆಸ್‌ನ ಹಾಲಿ ಶಾಸಕ ಕೆ.ವೈ. ನಂಜೇಗೌಡ ಮೇಲುಗೈ ಸಾಧಿಸಿದ್ದಾರೆ.
ಮರುಎಣಿಕೆ ನಡೆಸಿ ಸುಪ್ರೀಂಕೋರ್ಟ್ಗೆ ಅಧಿಕಾರಿಗಳು ಸಲ್ಲಿಸಿದ್ದ ಮಾಹಿತಿ ಇದೀಗ ಬಹಿರಂಗಗೊಂಡಿದ್ದು, ಮರು ಎಣಿಕೆಯಲ್ಲಿ ಕಾಂಗ್ರೆಸ್‌ನ ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707 ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಹಿನ್ನೆಲೆ |
2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್‌ನ ಕೆ.ವೈ.ನಂಜೇಗೌಡ 248 ಮತಗಳ ಅಂತರದಲ್ಲಿ ಗೆದ್ದಿದ್ದರು. ಆದ್ರೆ, ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿದ್ದ ಮಂಜುನಾಥ್ ಗೌಡ, ನಂಜೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದರು. ಆ ಬಳಿಕ ಕೋರ್ಟ್ ಸೂಚನೆಯಂತೆ ಕೋಲಾರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ನವೆಂಬರ್ 11ರಂದು ಒಟ್ಟು 18 ಸುತ್ತು ಮರುಮತ ಎಣಿಕೆ ಕಾರ್ಯ ನಡೆದಿತ್ತು. ಬಳಿಕ ಫಲಿತಾಂಶವನ್ನು ಚುನಾವಣಾ ಆಯೋಗ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿತ್ತು.
ಇದನ್ನೂ ಓದಿ : ಮಹೀಂದ್ರಾ ಇತಿಹಾಸದಲ್ಲೇ ಅತಿದೊಡ್ಡ ‘ಡೀಲ್’ | ಇಂಡೋನೇಷ್ಯಾದಿಂದ ಬಂತು ಬರೋಬ್ಬರಿ 35,000 ಸ್ಕಾರ್ಪಿಯೋ ಪಿಕ್-ಅಪ್‌ಗಳ ಆರ್ಡರ್!



















