ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಈ ಘಟನೆ ನಡೆದಿದೆ. ಕಬಡ್ಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತಕ್ಕೆ ಬಲಿಯಾದ ಆಟಗಾರ. ಪಂದ್ಯಾಟ ನಡೆದ ಸಂದರ್ಭದಲ್ಲಿ ಪ್ರೀತಮ್ ಆಟದ ಮಧ್ಯೆಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಟ್ಲುಪಾಡಿ ನಡುಮನೆ ನಿವಾಸಿಯಾಗಿರುವ ಪ್ರೀತಮ್ ಶೆಟ್ಟಿ ಕಬಡ್ಡಿಯಲ್ಲಿ ಉತ್ತಮ ಹೆಸರು ಮಾಡಿದ್ದರು. ಅವರು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ತಯಾರಿ ಕೂಡ ನಡೆಸಿದ್ದರು. ಆದರೆ, ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ಕಬಡ್ಡಿ ಆಟಗಾರ ನಿರ್ಭಯ್ ಸಿಂಗ್ ಹಾತೂರ್ ಹೃದಯಾಘಾತಕ್ಕೆ ಬಲಿಯಾಗಿದ್ದರು. ಈ ಘಟನೆಯ ಬೆನ್ನಲ್ಲೇ ಪ್ರೀತಮ್ ಸಾವನ್ನಪ್ಪಿರುವುದು ಕಬಡ್ಡಿ ಪ್ರಿಯರಿಗೆ ನೋವು ತಂದಿದೆ.