ಮಂಗಳೂರು : ಪತ್ನಿಯ ಜೊತೆ ಗೆಳೆಯನೊಬ್ಬನ ಸಲುಗೆಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಡೆದಿದೆ.
ಕಡಬದ ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ರಾಕೇಶ್ ಕೆ.ಎಸ್ (37) ಮೃತ ಯುವಕ. ನ.19 ರಂದು ಅಮಲು ಪದಾರ್ಥದೊಂದಿಗೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದ. ಅಸ್ವಸ್ಥಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್ ಪೋನ್ ಮೂಲಕ ಸಂಪರ್ಕದಲ್ಲಿರುವ ವಿಷಯ ತಿಳಿದು ತೀವ್ರ ನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೃತ ಯುವಕನ ತಂದೆ ಸೊಲೊಮೊನ್ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಂಗಳೂರು | ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆಗೈದ ಕಿರಾತಕರು ಅರೆಸ್ಟ್!



















