ಕಲಬುರಗಿ: ನಗರದ ಸ್ಟೇಷನ್ ಬಜಾರ್ ವ್ಯಾಪ್ತಿಯ ಮೋಹನ್ ಲಾಡ್ಜ್ ಹಿಂಭಾಗದಲ್ಲಿ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಸೈಯದ ಮೆಹಬೂಬ್ ಅಲಿಯಾಸ್ ಬಾಡಿ (22) ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯ ಹಿನ್ನೆಲೆ ಸ್ನೇಹಿತರೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಪಾರ್ಕ್‌ನಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಇದೇ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಪಾದಯಾತ್ರೆ ಹೋದವನಿಗೆ ಬಿಗ್ ಶಾಕ್.. ಮಲೆ ಮಹದೇಶ್ವರ ಭಕ್ತನ ಮೇಲೆ ಚಿರತೆ ಅಟ್ಯಾಕ್?



















