ಬೆಂಗಳೂರು: ತೊಗರಿ ಕಣಜ ಕಲಬುರಗಿ ಜಿಲ್ಲಾ ಪಂಚಾಯಿತಿಯಲ್ಲಿ 7 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ (Kalaburagi Zilla Panchayat Recruitment 2025) ಹೊರಡಿಸಲಾಗಿದೆ. ಡಿಸ್ಟ್ರಿಕ್ಟ್ ಎಂಐಎಸ್ ಕೋ-ಆರ್ಡಿನೇಟರ್, ಎಂಐಎಸ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕಲಬುರಗಿ ಜಿಲ್ಲಾ ಪಂಚಾಯಿತಿ
ಒಟ್ಟು ಹುದ್ದೆಗಳು: 07
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗದ ಸ್ಥಳ: ಕಲಬುರಗಿ
ಆಸಕ್ತ ಅಭ್ಯರ್ಥಿಗಳು kalaburagi.nic.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕಲಬುರಗಿ ಜಿಲ್ಲಾ ಪಂಚಾಯಿತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 23 ವರ್ಷಗಳು ಮತ್ತು ಗರಿಷ್ಠ 35 ವರ್ಷ ಆಗಿರಬೇಕು ಎಂದು ಮಾಹಿತಿ ನೀಡಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿಯಿಂದ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಡಿಸ್ಟ್ರಿಕ್ಟ್ ಎಂಐಎಸ್ ಕೋ-ಆರ್ಡಿನೇಟರ್ 1 ಹುದ್ದೆ ಖಾಲಿ ಇದೆ. ಎಂಐಎಸ್ ಡೇಟಾ ಎಂಟ್ರಿ ಆಪರೇಟರ್ 7 ಹುದ್ದೆಗಳು ಖಾಲಿ ಇವೆ. ಇದು ಕಲಬುರಗಿಯಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಭಾರಿ ಅನುಕೂಲವಾಗಲಿದೆ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ