ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್, ಜೈಲಿನಿಂದ ಡಿಆರ್ ಐ ಎಡಿಜಿಗೆ ಪತ್ರ ಬರೆದಿದ್ದಾರೆ.
ಪರಪ್ಪನ ಅಗ್ರಹಾರದಿಂದ ಪ್ರಕರಣದ ಕುರಿತು ಸುದೀರ್ಘ ಪತ್ರ ಬರೆದಿದ್ದಾರೆ. ನನ್ನ ಮೇಲೆ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. 14 ಕೆಜಿ ಚಿನ್ನ ತಂದಿರುವುದಾಗಿ ಸುಳ್ಳು ಕೇಸ್ ದಾಖಲು ಮಾಡಿದ್ದಾರೆ. ಅಧಿಕಾರಿಗಳು ನನಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ. ಸುಮಾರು 10ರಿಂದ 15 ಬಾರಿ ಅಧಿಕಾರಿಗಳು ನನ್ನ ಮೇಲೆ ಕೈ ಮಾಡಿದ್ದಾರೆ. ಆದರೆ, ಈ ಪ್ರಕರಣದಲ್ಲಿ ನಾನು ಅಮಾಯಕಿ. ಅಧಿಕಾರಿಗಳು ನನಗೆ ಹೊಡೆದಿದಕ್ಕೆ ಕಾರಣ ನೀಡಿಲ್ಲ. ನನಗೆ ಹೊಡೆದ ಅಧಿಕಾರಿಗಳನ್ನು ನಾನು ಗುರುತಿಸಬಲ್ಲೆ ಎಂದು ಆರೋಪ ಮಾಡಿದ್ದಾರೆ.
ನನಗೆ ಹೊಡೆದು ಸ್ಟೇಟ್ಮೆಂಟ್ ಗೆ ಸಹಿ ಮಾಡಿಸಿಕೊಂಡಿದ್ದಾರೆ. ಸಹಿ ಮಾಡಲಿಲ್ಲ ಅಂದರೆ ತಂದೆ ಹೆಸರಿನೊಂದಿಗೆ ಎಕ್ಸಪೋಸ್ ಮಾಡ್ತೀವಿ ಎಂದು ನನಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ಕೊಟ್ಟಿದ್ದಾರೆ. 40 ವೈಟ್ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ. ಟೈಪ್ ಮಾಡಿದ ಕೆಲವಂದಿಷ್ಟು ದಾಖಲೆ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ. ಕೋರ್ಟ್ ಗೆ ಹಾಜರು ಪಡಿಸುವ ಮುನ್ನ ನನಗೆ ನಿದ್ದೆ ಮಾಡಲು ಬಿಟ್ಟಿಲ್ಲ. ಸರಿಯಾಗಿ ಊಟ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ನನ್ನದು ತಪ್ಪಿಲ್ಲ. ಬೇಕಂತಲೇ ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂದು ರನ್ಯಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.