ಬೆಳಗಾವಿ: ಬೆಳಗಾವಿ ಪಾಲಿಕೆಯ ಆಡಳಿತದಲ್ಲಿ ಕನ್ನಡ ಕಡ್ಡಾಯ ವಿಚಾರವಾಗಿ ಎಂಇಎಸ್ ಪಾಲಿಕೆ ಸದಸ್ಯನೊಬ್ಬ ಮಹಾರಾಷ್ಟ್ರ ಸಿಎಂನನ್ನು ಭೇಟಿಯಾಗಿ ದೂರು ನೀಡಿದ್ದಾರೆ.
ಎಂಇಎಸ್ ಪಾಲಿಕೆ ಸದಸ್ಯ ರವಿ ಸಾಳುಂಕೆ ದೂರು ಸಲ್ಲಿಸಿದ ಪಾಲಿಕೆಯ ಸದಸ್ಯ. ಬೆಳಗಾವಿಯಲ್ಲಿ ಒತ್ತಾಯಪೂರ್ವಕವಾಗಿ ಕನ್ನಡ ಹೇರಲಾಗುತ್ತಿದೆ. ಗಡಿ ವಿವಾದ ನ್ಯಾಯಾಲಯದಲ್ಲಿ ಇರುವ ಸಂದರ್ಭದಲ್ಲಿ ಕನ್ನಡ ಕಡ್ಡಾಯ ಬೇಡ. ಇದನ್ನು ನೀವು ಪ್ರಶ್ನಿಸಬೇಕು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಗೆ ಮನವಿ ಸಲ್ಲಿಸಿದ್ದಾರೆ.