ಬೆಂಗಳೂರು: 50ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಿಸಲು ಕರುನಾಡು ಸಿದ್ಧವಾಗಿ ನಿಂತಿದೆ. ಈ ವೇಳೆ ಐಟಿಬಿಟಿ ಕಚೇರಿಗಳ ಮೇಲೆಯೂ ಕನ್ನಡದ ಬಾವುಟವನ್ನು ಕಡ್ಡಾಯವಾಗಿ ಹಾಸಿರುವಂತೆ ಸರ್ಕಾರ ಸೂಚಿಸಿದೆ.
ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ (Kannada Flag) ಹಾರಿಸಲೇಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಜಿಲ್ಲೆಯಲ್ಲಿ ಶೇ. 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು ಎಂದಿದ್ದಾರೆ.
ರಾಜ್ಯೋತ್ಸವ ಆಚರಣೆಗೆ ಕನ್ನಡ ಸಂಘಟನೆಗಳು ಬಲವಂತ ಮಾಡುವಂತಿಲ್ಲ. ಎಲ್ಲರೂ ಸ್ವಯಂಪ್ರೇರಿತವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಆಚರಣೆ ಮಾಡದ ಸಂಸ್ಥೆಯ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.