ಬೆಂಗಳೂರು ಕರ್ನಾಟಕದಲ್ಲಿಲ್ವ ಅನ್ನೋ ಪ್ರಶ್ನೆ ಹುಟ್ಟಲು ಕಾರಣ ನೈರುತ್ಯ ರೈಲು ವಲಯ ಧೋರಣೆ. ಹುಬ್ಬಳ್ಳಿ, ಮೈಸೂರಲ್ಲಿ ಪರೀಕ್ಷೆ ಬರೆಯಲು ಕನ್ನಡಕ್ಕೆ ಅವಕಾಶ ಮಾಡಿಕೊಟ್ಟಿದೆ. ಆದರೆ ಬೆಂಗಳೂರಲ್ಲಿ ಕೇವಲ ಇಂಗ್ಲಿಷ್, ಹಿಂದಿಯಲ್ಲಿ ಪರೀಕ್ಷೆ ಬರೆಯುವ ಸ್ಥಿತಿ ಎದುರಾಗಿದೆ.
ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು.
ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಸದ್ಯ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಕನ್ನಡ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ | ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದ ಓಮನ್


















