ಮಂಗಳೂರು : ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಕನ್ನಡಿಗ ಐರ್ಲೆಂಡ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಸಾಂಜೋ ಸುನೀಲ್(31) ಈ ರೀತಿ ನಿಗೂಢವಾಗಿ ಸಾವನ್ನಪ್ಪಿರುವ ಯುವಕ.
ತಾನು ವಾಸಿಸುತ್ತಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಹೀಗಾಗಿ ಅನುಮಾನಾಸ್ಪದ ಸಾವಿನ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಐರ್ಲೆಂಡ್ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಸಾವನ್ನಪ್ಪಿರುವ ಸಾಂಜೋ ಸುನೀಲ್ ಐರ್ಲೆಂಡ್ ಡಬ್ಲಿನ್ನ ಫಿಂಗ್ಲಾಸ್‌ನ ಚಾರ್ಲ್ಸ್ಟೌನ್‌ನಲ್ಲಿರುವ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ವರ್ಷದ ಹಿಂದೆ ಕಡಬ ಮೂಲದ ಯುವತಿಯನ್ನ ಸಾಂಜೋ ಸುನೀಲ್ ವಿವಾಹವಾಗಿದ್ದರು.
ಸುನೀಲ್ ಮೊದಲು ಇಸ್ರೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರ ಪತ್ನಿ ಐರ್ಲೆಂಡ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಇತ್ತೀಚೆಗಷ್ಟೇ ಸಾಂಜೋ ಸುನೀಲ್ ಕೂಡ ಐರ್ಲೆಂಡ್‌ಗೆ ತೆರಳಿದ್ದರು. ಪೊಲೀಸರ ತನಿಖೆ ನಂತರ ಘಟನೆಯ ಹಿಂದಿನ ಸತ್ಯ ಬಹಿರಂಗವಾಗಬೇಕಿದೆ.
ಇದನ್ನೂ ಓದಿ : ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು



















