ಕರ್ನಾಟಕದಲ್ಲಿಯೇ ಕನ್ನಡ ಮರೆಯಾಗುತ್ತಿದೆ ಎಂಬ ನೋವಿನ ಮಧ್ಯೆ ಜರ್ಮನಿಯ ಮಹಿಳೆಯೊಬ್ಬರು ಕನ್ನಡ ಮಾತನಾಡುವುದನ್ನು ಕಂಡು ಇಡೀ ಕರುನಾಡು ಸಂತಸ ವ್ಯಕ್ತಪಡಿಸುತ್ತಿದೆ.
ಮೂಲತಃ ಜರ್ಮನಿಯಲ್ಲಿ ಹುಟ್ಟಿದ ಬೆಳೆದ ಯುವತಿ ಜೆನಿಫರ್ ಎಂಬುವವರು ಈಗ ಕನ್ನಡಿಗರ ಮನ ಗೆದ್ದವರು. ಜೆನಿಫರ್ ಬಾಯಲ್ಲಿ ಕನ್ನಡ ಕೇಳುವುದೇ ಒಂದು ಚಂದ ಎಂದು ನೆಟ್ಟಿಗರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಜೆನಿಫರ್ ಅವರು ಕನ್ನಡ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಸಾಮಾಜಿಕ ಚಾಲತಾಣದಲ್ಲಿ ಆಕ್ಟೀವ್ ಆಗಿರುವ ಜೆನಿಫರ್ ಕರ್ನಾಟಕದಲ್ಲಿ ನೆಲೆಸಿದ್ದು, ಈಗ ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಿದ್ದಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ.
@ChekrishnaCk ಎಂಬ ಟ್ವಿಟರ್ ಖಾತೆಯ ಮೂಲಕ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸೆ. 9ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ನೆಟ್ಟಿಗರು ಹಾರೈಸುತ್ತಿದ್ದಾರೆ.