ಬೆಂಗಳೂರು : ಕಾಂತಾರ ಚಾಪ್ಟರ್ 1 ಸಿನಿಮಾ ಹೊಸ ಇತಿಹಾಸ ಬರೆದಿದೆ. ಕಾಂತಾರ ಬಿಡುಗಡೆಯಾದ ಒಂದೇ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಂಡಿದೆ. ಕಲೆಕ್ಷನ್ ವಿಚಾರದಲ್ಲಿ ಇದುವರೆಗೂ ಮೌನವಾಗಿದ್ದ ಕಾಂತಾರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಒಂದೇ ವಾರದಲ್ಲಿ ಬರೋಬ್ಬರಿ 509 ಕೋಟಿ ರೂಪಾಯಿ ಬಾಚಿಕೊಂಡಿ ಕಾಂತಾರ, ವಿಶ್ವದಾದ್ಯಂತ ಕಲೆಕ್ಷನ್‌ನಲ್ಲಿ ಧೂಳೆಬ್ಬಿಸಿದೆ.
ಇಂದಿಗೂ ದೇಶಾದ್ಯಂತ ಕಾಂತಾರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರಿಗೆ ಸಿನಿಮಾ ನೋಡಲು ಹಲವೆಡೆ ಥಿಯೇಟರ್‌ನಲ್ಲಿ ಟಿಕೆಟ್‌ಗಳೇ ಸಿಗುತ್ತಿಲ್ಲ. ಅ.2ರಂದು ಕಾಂತಾರ ಚಿತ್ರ ವಿಶ್ವದಾದ್ಯಂತ 7 ಭಾಷೆಗಳಲ್ಲಿ ತೆರೆಕಂಡಿತ್ತು.ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಕಾಂತಾರಕ್ಕೆ ಅತ್ಯದ್ಭುತ ರೆಸ್ಪಾನ್ಸ್ ಸಿಗುತ್ತಿದ್ದು ವಿದೇಶದಲ್ಲೂ ಕಾಂತಾರ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಿಣಾಮ ಮೊದಲ ವಾರ 509 ಕೋಟಿ ಕಲೆಕ್ಷನ್ ಮಾಡಿದೆ.
ಇನ್ನು ಕಾಂತಾರ ಒಟಿಟಿ ಹಕ್ಕುಗಳನ್ನು ಅಮೇಜಾನ್ ಪ್ರೈಮ್ ಪಡೆದುಕೊಂಡಿದ್ದು, ಅಂದಾಜು ಸುಮಾರು 125 ಕೋಟಿ ರೂ. ಗಳಿಗೆ ಡಿಜಿಟಲ್ ಪ್ರಸಾರದ ಹಕ್ಕನ್ನು ಅಮೆಜಾನ್ ಪಡೆದುಕೊಂಡಿದೆ ಎಂದು ವರದಿಯಾಗಿದೆ.