‘ಕರಾವಳಿ’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಡೆದ ಗಲಾಟೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ನಟ ಪ್ರಜ್ವಲ್ ದೇವರಾಜ್ ಅಭಿನಯದ ‘ಕರಾವಳಿ’ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದ ವೇಳೆ ನಡೆದ ಘಟನಾ ಸಂಬಂಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚಿತ್ರದ ಕೋ-ಪ್ರೊಡ್ಯೂಸರ್ ಅಂಕಿತ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಿತ್ರತಂಡದೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ಸೃಷ್ಟಿಸಿದವರು ಸಾಮಾನ್ಯ ಅಭಿಮಾನಿಗಳು ಅಲ್ಲ, ಪ್ರಜ್ವಲ್ ದೇವರಾಜ್ ಅವರ ಆಪ್ತರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ದೂರಿನಲ್ಲಿ ಮತ್ತೊಂದು ಗಂಭೀರ ಆರೋಪವನ್ನೂ ಮಾಡಲಾಗಿದೆ. ನಟ ಪ್ರಜ್ವಲ್ ದೇವರಾಜ್ ಉದ್ದೇಶಪೂರ್ವಕವಾಗಿಯೇ ಪರಿಸ್ಥಿತಿಯನ್ನು ಎತ್ತಿಕಟ್ಟಿದ್ದು, ಅದರ ಪರಿಣಾಮ ಕಾರ್ಯಕ್ರಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು ಎಂದು ಅಂಕಿತ್ ಆರೋಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ದೂರಿನಲ್ಲಿರುವ ಆರೋಪಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.
‘ಕರಾವಳಿ’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಿಂದ ಆರಂಭವಾದ ಕಾಂಟ್ರವರ್ಸಿ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ತನಿಖೆಯ ಬಳಿಕವೇ ಗಲಾಟೆಗೆ ನಿಜವಾದ ಕಾರಣ ಏನು ಮತ್ತು ಆರೋಪಗಳಲ್ಲಿ ಎಷ್ಟು ಸತ್ಯಾಂಶವಿದೆ ಎಂಬುದು ಸ್ಪಷ್ಟವಾಗಲಿದೆ.
ಇದನ್ನೂ ಓದಿ : ಮೆಟಲ್ ಬಾಡಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಬಿಡುಗಡೆ : 150 ಕಿ.ಮೀ ರೇಂಜ್‌ನೊಂದಿಗೆ ಕೊಮಾಕಿ MG Pro V, Pro+ ಮಾರುಕಟ್ಟೆಗೆ!



















