ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ರದ್ದುಗೊಳಿಸಿದ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಮತ್ತು ಜಿಲ್ಲಾಧಿಕಾರಿಯವರನ್ನು ತಡೆದು ಪ್ರಶ್ನಿಸಲಾಗಿದೆ.
ಇದೇ ವೇಳೆ ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ಜಿಲ್ಲಾಧಿಕಾರಿಗಳು ನೀಡಿದ್ದ ಗಡುವಿನಂತೆ ನವೆಂಬರ್ 5ರೊಳಗೆ ಕಡ್ಡಾಯವಾಗಿ ಆರಂಭಿಸಬೇಕು ಎಂದು ಒತ್ತಾಯಿಸಲಾಗಿದೆ. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಗೌರವಾಧ್ಯಕ್ಷ ಆನ್ಸರ್ ಅಹ್ಮದ್ ಎಚ್ಚರಿಸಿದ್ದಾರೆ.



















