ಬೆಂಗಳೂರು: ಸೋನು ನಿಗಮ್ ಕಾರ್ಯಕ್ರಮಕ್ಕೆ ಕರವೇ ವಿರೋಧ ವ್ಯಕ್ತಪಡಿಸಿದೆ. ಶೋಗೆ ಅನುಮತಿ ನೀಡಬಾರದು ಎಂದು ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿದೆ.
ಸೋನು ನಿಗಮ್ 2025ರ ಏಪ್ರಿಲ್ನಲ್ಲಿ ಬೆಂಗಳೂರಿನ ಕಾಲೇಜಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕನ್ನಡಿಗರ ಸ್ವಾಭಿಮಾನಕ್ಕೆ ಅಪಮಾನ ಮಾಡಿದ್ದರು. ಹೀಗಾಗಿ ಅವರ ಕಾರ್ಯಕ್ರಮ ಬ್ಯಾನ್ ಮಾಡಬೇಕು ಎಂದು ಮನವಿ ಮಾಡಲಾಗಿದೆ. ಹೀಗಾಗಿ ನಾರಾಯಣಗೌಡ ನೇತೃತ್ವದಲ್ಲಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಅನುಮತಿ ನೀಡಿದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಲಾಗಿದೆ.


















