ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್ 25ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 26ರಂದು ಲಡಾಖ್ ನ ದ್ರಾಸ್ ಗೆ ಭೇಟಿ ನೀಡಲಿದ್ದಾರೆ.
ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ.ಡಿ ಮಿಶ್ರಾ ಭಾನುವಾರ ಸೆಕ್ರೆಟರಿಯೇಟ್ ನಲ್ಲಿ ಸಭೆ ನಡೆಸಿದರು. ಅಲ್ಲದೇ, ದ್ರಾಸ್ ನಲ್ಲಿನ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಭಾರತದಲ್ಲಿ ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ. 1999ರಲ್ಲಿ ಆಪರೇಷನ್ ವಿಜಯ್ ವಿಜಯವನ್ನು ಈ ದಿನ ನೆನಪಿಸುತ್ತದೆ. ಈ ಘಟನೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ಧದ ಮುಕ್ತಾಯವನ್ನು ಸೂಚಿಸುತ್ತದೆ. 1999ರ ಮೇನಲ್ಲಿ ಕಾರ್ಗಿಲ್ ಯುದ್ಧ ಆರಂಭವಾಗಿತ್ತು.
ಈ ದಿನವು ರಾಷ್ಟ್ರದ ರಕ್ಷಣೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೈನಿಕರ ಧೈರ್ಯವನ್ನು ಗೌರವಿಸುತ್ತದೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ನಿರ್ಣಯ ಮತ್ತು ಶಕ್ತಿಯನ್ನು ಆಚರಿಸುತ್ತದೆ. ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವವನ್ನು ಜುಲೈ 26 ರಂದು ದೇಶದಾದ್ಯಂತ ಆಚರಿಸಲಾಗುತ್ತದೆ.