ಬೆಂಗಳೂರು: ರಾಜ್ಯದ ಕೃಷಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಅಗ್ರಿಕಲ್ಚರಲ್ ಸೇಲ್ಸ್ ಡಿಪಾರ್ಟ್ ಮೆಂಟ್ ನಲ್ಲಿ ಖಾಲಿ ಇರುವ 180 ಹುದ್ದೆಗಳ ನೇಮಕಾತಿಗಾಗಿ (Karnataka Agricultural Sales Department Recruitment 2025) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಎಂಜಿನಿಯರ್ (ಸಿವಿಲ್), ಜೂನಿಯರ್ ಎಂಜಿನಿಯರ್ (ಸಿವಿಲ್) ಸೇರಿ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚೆನ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕರ್ನಾಟಕ ಅಗ್ರಿಕಲ್ಚರಲ್ ಸೇಲ್ಸ್ ಡಿಪಾರ್ಟ್ ಮೆಂಟ್
ಒಟ್ಟು ಹುದ್ದೆ: 180
ಹುದ್ದೆಗಳ ಹೆಸರು: ಅಸಿಸ್ಟಂಟ್ ಎಂಜಿನಿಯರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಗ್ರಿ, ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ 18ರಿಂದ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಯಾವ ಹುದ್ದೆ ಎಷ್ಟು ಖಾಲಿ?
ಅಸಿಸ್ಟಂಟ್ ಎಂಜಿನಿಯರ್ – 10
ಜೂನಿಯರ್ ಎಂಜಿನಿಯರ್ – 5
ಮಾರ್ಕೆಟ್ ಸೂಪರ್ ವೈಸರ್- 30
ಎಫ್ ಡಿ ಎ – 30
ಎಸ್ ಡಿ ಎ – 30
ಸೇಲ್ಸ್ ಅಸಿಸ್ಟಂಟ್- 75
ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪಿಡಬ್ಲ್ಯೂಡಿ ವರ್ಗದವರಿಗೆ 250 ರೂ. ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು raitamitra.karnataka.gov.in ಗೆ ಭೇಟಿ ನೀಡಬಹುದು.



















