ಬೆಂಗಳೂರು: ರಾಜ್ಯ ಸರ್ಕಾರದ ಕರ್ನಾಟಕ ಜೀವವೈವಿಧ್ಯ ಮಂಡಳಿಯಲ್ಲಿ ಖಾಲಿ ಇರುವ ಕನ್ಸಲ್ಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸಸ್ಯಶಾಸ್ತ್ರದಲ್ಲಿ ನಿಪುಣರಾದ ಒಂದು ಕನ್ಸಲ್ಟಂಟ್ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿದೆ.
ನೇಮಕಾತಿ ಮಾಡಿಕೊಲ್ಳುತ್ತಿರುವ ಹುದ್ದೆಯು ಗುತ್ತಿಗೆ ಆಧಾರಿತವಾಗಿದ್ದು, ನಿರ್ದಿಷ್ಟ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತದೆ. ಸಸ್ಯಶಾಸ್ತ್ರದ ಸಲಹೆಗಾರನಾಗಿ ಆಯ್ಕೆಯಾದ ಅಭ್ಯರ್ಥಿಯು ಜೀವವೈವಿಧ್ಯದ ದಾಖಲಾತಿ, ಸಂಶೋಧನೆ ಮತ್ತು ಆ ಸಂಶೋಧನೆಯನ್ನು ಪ್ರಕಟಿಸುವ ಕಾರ್ಯಗಳಿಗೆ ಸಹಕಾರ ನೀಡಬೇಕಾಗುತ್ತದೆ. ಕಾರ್ಯಕ್ಷಮತೆ ಆಧಾರದ ಮೇಲೆ ಉದ್ಯೋಗಿಯ ಕಾರ್ಯಾವಧಿ ವಿಸ್ತರಣೆ ಮಾಡುವ ಸಾಧ್ಯತೆಯೂ ಇರುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಬ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಸ್ಯಶಾಸ್ತ್ರ ಅಥವಾ ಜೀವವಿಜ್ಞಾನ ವಿಭಾಗದಲ್ಲಿ ಪಿಎಚ್.ಡಿ ಪಡೆದಿರಬೇಕು. ಜೀವವೈವಿಧ್ಯ ದಾಖಲೀಕರಣ, ಸಂರಕ್ಷಣಾ ಯೋಜನೆಗಳ ರಚನೆ, ಸಸ್ಯ ವರ್ಗೀಕರಣ, ಮತ್ತು ಜೀವವೈವಿಧ್ಯ ಪರಂಪರೆಯ ತಾಣಗಳ ನಿರ್ವಹಣೆಯ ಬಗ್ಗೆ ಪ್ರಾಯೋಗಿಕ ಅನುಭವ ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ kbb.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅಧಿಸೂಚನೆ ಓದಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ನಿಗದಿತ ಅವಧಿಯೊಳಗೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಆಡಳಿತ ಅಧಿಕಾರಿ,
ಕರ್ನಾಟಕ ಜೀವವೈವಿಧ್ಯ ಮಂಡಳಿ,
ನೆಲ ಮಹಡಿ, ವನವಿಕಾಸ್, 18ನೇ ಕ್ರಾಸ್,
ಮಲ್ಲೇಶ್ವರಂ, ಬೆಂಗಳೂರು – 560003.