ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್‌ನಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅದರಲ್ಲೂ, ಅಲ್ಪಸಂಖ್ಯಾತರ ಓಲೈಕೆ ಮಾಡುವ ದೃಷ್ಟಿಯಿಂದ ಸಿದ್ದರಾಮಯ್ಯ ಅವರು ಹಿಂದೂಗಳ ವಿರುದ್ಧ ನಿಲುವು ತಾಳುತ್ತಾರೆ ಎಂಬ ಆರೋಪ ಮೊದಲಿನಿಂದಲೂ ಇದೆ. ಈ ಹಣೆಪಟ್ಟಿಯಿಂದ ಹೊರಬರಲು ಹಿಂದೂಗಳ ಧಾರ್ಮಿಕ ಪ್ರವಾಸಕ್ಕಾಗಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಘೋಷಣೆ ಮಾಡಿದ್ದಾರೆ. ಅವುಗಳು ಈ ಕೆಳಗಿನಂತಿವೆ.
• ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿ.ಬಿ.ಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ
• ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿ.ಬಿ.ಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ. ಅನುದಾನ ಮೀಸಲಿರಿಸಿದೆ.
• ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು ಮೂರು ವರ್ಷಗಳಲ್ಲಿ ಪುನರುಜ್ಜೀವನಗೊಳಿಸಲು ʻಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆʼ ಕೈಗೊಳ್ಳಲಾಗುತ್ತಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
• ʻಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯʼ ಮತ್ತು ʻಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯʼಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲು ಉದ್ದೇಶಿಸಿದೆ.
• ಹೊರ ರಾಜ್ಯದ ಪುಣ್ಯಕ್ಷೇತ್ರಗಳಲ್ಲಿರುವ ಕರ್ನಾಟಕ ರಾಜ್ಯದ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ಧಿಪಡಿಸಲು ಈ ಕೆಳಕಂಡಂತೆ ಕ್ರಮ ಕೈಗೊಳ್ಳಲಾಗುವುದು.
• ವಾರಣಾಸಿಯಲ್ಲಿಪ್ರಸ್ತುತಇರುವಛತ್ರವುಶಿಥಿಲಗೊಂಡಿರುವುರಿಂದಹೊಸರಾಜ್ಯಛತ್ರವನ್ನುನಿರ್ಮಿಸಲಾಗುವುದು.
• ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸೇರಿದ ಜಾಗದಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿದ್ದು, ಇದರ ನವೀಕರಣವನ್ನು ಕೈಗೊಳ್ಳಲಾಗುವುದು.
• ಶ್ರೀಶೈಲಂ ಕ್ಷೇತ್ರದಲ್ಲಿ ಹೊಸದಾಗಿ ಯಾತ್ರಿನಿವಾಸ ನಿರ್ಮಾಣ ಮಾಡಲಾಗುವುದು.
• ತುಳಜಾಪುರದಲ್ಲಿ ಪ್ರಸ್ತುತ ಇರುವ ಛತ್ರವನ್ನು ಹೊಸದಾಗಿ ನಿರ್ಮಾಣ ಮಾಡಲಾಗುವುದು.
ಇದನ್ನೂ ಓದಿ : ಸಿದ್ದು ಸಿಹಿ ಸುದ್ದಿ.. ಸರ್ಕಾರಿ ಶಾಲೆಗಳ ಜೀರ್ಣೋದ್ಧಾರ, 15 ಸಾವಿರ ಶಿಕ್ಷಕರ ನೇಮಕಾತಿ



















