ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಐತಿಹಾಸಿಕ ತೀರ್ಮಾನ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ರಾಜ್ಯ ಸರ್ಕಾರವು ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳ ಶಿಕ್ಷಣ, ವ್ಯಕ್ತಿತ್ವ ವಿಕಸನ ಸೇರಿ ಸರ್ವತೋಮುಖ ಏಳಿಗೆಗೆ ಅಡ್ಡಿಯಾಗುತ್ತಿರುವ ಕಾರಣ ಸಿದ್ದರಾಮಯ್ಯನವರು ಇಂತಹ ಘೋಷಣೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮಕ್ಕಳು ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಅವರು ಸಾಮಾಜಿಕವಾಗಿ ಬೆರೆಯುತ್ತಿಲ್ಲ. ಅಲ್ಲದೆ, ಅಶ್ಲೀಲ ದೃಶ್ಯಗಳು ಸೇರಿ ಹಲವು ವಿಷಯಗಳ ಕಡೆ ಅವರು ಗಮನ ಹರಿಸುತ್ತಿದ್ದಾರೆ ಎಂಬ ಕಾರಣದಿಂದಾಗಿ ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಕೆ ನಿಷೇಧಿಸಲಾಗಿದೆ.
ವಜುಭಾಯಿ ವಾಲಾ ದಾಖಲೆಗೆ ಹತ್ತಿರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಖ್ಯಾತಿ ಹೊಂದಿರುವ ವಜುಭಾಯಿ ವಾಲಾ ಅವರ ದಾಖಲೆ ಸಮೀಪ ಬಂದಿದ್ದಾರೆ. ಅಲ್ಲದೆ, ದೇಶದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಎರಡನೇ ಹಣಕಾಸು ಸಚಿವ ಎನಿಸಿದ್ದಾರೆ. ವಜುಭಾಯಿ ವಾಲಾ ಅವರು ಗುಜರಾತ್ ಹಣಕಾಸು ಸಚಿವರಾಗಿ 18 ಬಾರಿ ಬಜೆಟ್ ಮಂಡಿಸಿದ್ದು ದೇಶದಲ್ಲಿಯೇ ದಾಖಲೆಯಾಗಿದೆ.
4.48 ಲಕ್ಷ ಕೋಟಿ ರೂ. ಬಜೆಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4.48 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಆ ಮೂಲಕ ರಾಜ್ಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಮೊತ್ತದ ಬಜೆಟ್ ಮಂಡಿಸಿದವರು ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಹಾಗೆಯೇ, ರಾಜ್ಯದ ಸಾಲವು 8.24 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, 97 ಸಾವಿರ ಕೋಟಿ ರೂಪಾಯಿ ವಿತ್ತೀಯ ಕೊರತೆ ಇದೆ.
ಇದನ್ನೂ ಓದಿ: Karnataka Budget 2026 | ರಾಜ್ಯದ ರೈತರಿಗೆ ಗುಡ್ ನ್ಯೂಸ್ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ



















