ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗ್ರಾಮೀಣಾಭಿವೃದ್ಧಿಗೆ 16 ಸಾವಿರ ಕೋಟಿ ರೂ. ಯೋಜನೆಗೆ ಚಾಲನೆ: ಬಡವರಿಗೆ 30×40 ನಿವೇಶನ, ಅಕ್ರಮಕ್ಕೆ ಸಿಎಂ ಖಡಕ್ ಎಚ್ಚರಿಕೆ

November 21, 2026
ಗ್ರಾಮೀಣಾಭಿವೃದ್ಧಿ
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ 16 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಸರ್ಕಾರ ರೂಪಿಸಿದ್ದು, ಇದರಲ್ಲಿ 10 ಸಾವಿರ ಕೋಟಿ ರೂಪಾಯಿಯನ್ನು 15 ಸಾವಿರ ಕಿಲೋಮೀಟರ್ ರಸ್ತೆ ಅಭಿವೃದ್ಧಿಗೆ ಹಾಗೂ 6 ಸಾವಿರ ಕೋಟಿ ರೂಪಾಯಿಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಹಾಗೂ ‘ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ’ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಮಗಾರಿಯಲ್ಲಿ ಪಾರದರ್ಶಕತೆ, ಅಕ್ರಮಕ್ಕೆ ಖಡಕ್ ಎಚ್ಚರಿಕೆ

ಇಷ್ಟು ದೊಡ್ಡ ಮೊತ್ತದ ಅನುದಾನವನ್ನು ಗುತ್ತಿಗೆದಾರರ ಉದ್ಧಾರಕ್ಕಾಗಲಿ ಅಥವಾ ಅವರ ಜೇಬು ತುಂಬಿಸಲಾಗಲಿ ನೀಡಿಲ್ಲ; ಬದಲಾಗಿ ಗ್ರಾಮೀಣ ಜನರ ಬದುಕು ಬದಲಾಯಿಸಲು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಅನುದಾನದಲ್ಲಿ ಒಂದು ರೂಪಾಯಿಯೂ ದುರುಪಯೋಗವಾಗಬಾರದು ಹಾಗೂ ಕಾಮಗಾರಿಗಳಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆ ಕಡ್ಡಾಯವಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿಯೊಂದು ಕಾಮಗಾರಿ ಆರಂಭಿಸುವ ಮುನ್ನ ಮತ್ತು ಪೂರ್ಣಗೊಂಡ ಬಳಿಕ ಸ್ಥಳದ ವಿಡಿಯೋ ಹಾಗೂ ಛಾಯಾಚಿತ್ರಗಳನ್ನು ತೆಗೆದು ಕಡತದಲ್ಲಿ ದಾಖಲಿಸಬೇಕು. ಕಾಮಗಾರಿ ನಡೆಯುವ ಸ್ಥಳದ ನಿಖರ ಜಿಪಿಎಸ್ ನಿರ್ದೇಶಾಂಕಗಳನ್ನು ನಮೂದಿಸಬೇಕು. ಟೆಂಡರ್ ಪ್ರಕ್ರಿಯೆ ಇಲ್ಲದೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ. ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಡ್ಯಾಶ್‌ಬೋರ್ಡ್ ಮೂಲಕ ಪರಿಶೀಲಿಸಲಾಗುವುದು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಚಿತ್ರಗಳು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾಗಬೇಕು ಹಾಗೂ ಪ್ರತಿ ಪಂಚಾಯಿತಿ ಮತ್ತು ಜಿಲ್ಲಾ ಮಟ್ಟದಲ್ಲಿ ವಾಟ್ಸ್‌ಆ್ಯಪ್ ಗುಂಪುಗಳನ್ನು ರಚಿಸಿ ಕಾಮಗಾರಿಗಳ ವಿವರಗಳನ್ನು ಹಂಚಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಚೆನ್ನಾಗಿರುವ ರಸ್ತೆಗೆ ಮತ್ತೆ ಹಣ ಖರ್ಚು ಮಾಡುವುದು, ಕಾಮಗಾರಿ ಮಾಡದೆ ಬಿಲ್ ಪಡೆಯುವುದು ಹಾಗೂ ಅಧಿಕಾರಿಗಳೊಂದಿಗೆ ಶಾಮೀಲಾಗಿ ಹಣ ದುರುಪಯೋಗಪಡಿಸಿಕೊಳ್ಳುವ ಅಕ್ರಮಗಳಿಗೆ ಇನ್ನು ಮುಂದೆ ಅವಕಾಶವಿಲ್ಲ ಎಂದು ಎಚ್ಚರಿಸಿದರು.

ರಸ್ತೆ ಮತ್ತು ಪಂಚಾಯಿತಿ ಅಭಿವೃದ್ಧಿಗೆ ದಾಖಲೆ ಅನುದಾನ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ 15 ಸಾವಿರ ಕಿಲೋಮೀಟರ್ ರಸ್ತೆಗಳ ಮರು ಡಾಂಬರೀಕರಣ, ಜಲ್ಲಿ ರಸ್ತೆ ಅಭಿವೃದ್ಧಿ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕಾಮಗಾರಿಯ ಸ್ವರೂಪಕ್ಕೆ ಅನುಗುಣವಾಗಿ ಪ್ರತಿ ಕಿಲೋಮೀಟರ್‌ಗೆ 38 ರಿಂದ 70 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜಿಸಲಾಗಿದೆ. ಇದಲ್ಲದೆ, ಈಗಾಗಲೇ ಪ್ರಗತಿ ಪಥ ಯೋಜನೆಯಡಿ 5 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ವಿವರಿಸಿದರು.

ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಟ್ಟಿರುವ 6 ಸಾವಿರ ಕೋಟಿ ರೂಪಾಯಿಯನ್ನು ಚರಂಡಿ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳಿಗೆ ಬಳಸಲಾಗುವುದು. ಆಯಾ ಪಂಚಾಯಿತಿಗಳಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಗುರುತಿಸಿ ಜಿಲ್ಲಾಧಿಕಾರಿಗಳ ಅನುಮತಿಯೊಂದಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅನುದಾನ ಒದಗಿಸಲಾಗಿದೆ ಎಂದರು.

ಬಡವರಿಗೆ 30×40 ನಿವೇಶನ, ಮೊದಲ ಹಂತದಲ್ಲಿ 5 ಲಕ್ಷ ಹಂಚಿಕೆ

ರಾಜ್ಯದಲ್ಲಿ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಇದ್ದು, ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನು ವಿತರಿಸಲು ಸುಮಾರು 9 ಸಾವಿರ ಎಕರೆ ಜಮೀನು ಗುರುತಿಸಲಾಗಿದೆ. ನಿವೇಶನಗಳ ಅಭಿವೃದ್ಧಿಗೆ ಅಗತ್ಯವಿರುವ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ವೆಚ್ಚವನ್ನು ವಾಸ್ತವಿಕವಾಗಿ ಪರಿಶೀಲಿಸಿ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಈ ಹಿಂದೆ ಬಡವರಿಗೆ 20×30 ಅಡಿ ನಿವೇಶನ ನೀಡಲಾಗುತ್ತಿತ್ತು. ಆದರೆ ಕುಟುಂಬ ಬೆಳೆದಂತೆ ಮನೆ ಕಟ್ಟಲು ಜಾಗ ಸಾಲದೆ ಮತ್ತೆ ಹೊಸ ಕೊಳಚೆ ಪ್ರದೇಶಗಳು ಸೃಷ್ಟಿಯಾಗುತ್ತವೆ. ಇದನ್ನು ತಪ್ಪಿಸಿ ಬಡವರ ಮಕ್ಕಳೂ ಉತ್ತಮ ಮನೆ ಕಟ್ಟಿಕೊಳ್ಳಲು ಅನುಕೂಲವಾಗುವಂತೆ ಕನಿಷ್ಠ 30×40 ಅಡಿ ನಿವೇಶನ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಅಗತ್ಯವಿದ್ದರೆ ನಿವೇಶನಗಳ ಸಂಖ್ಯೆಯನ್ನು ಕಡಿಮೆ ಮಾಡಿಯಾದರೂ ದೊಡ್ಡ ನಿವೇಶನ ನೀಡಲಾಗುವುದು. ಮನೆ ಇಲ್ಲದ ಕುಟುಂಬಗಳಿಗೆ ಆದ್ಯತೆ ನೀಡಬೇಕು ಹಾಗೂ ಈಗಾಗಲೇ ಮನೆ ಅಥವಾ ನಿವೇಶನ ಹೊಂದಿರುವವರಿಗೆ ಮತ್ತೊಮ್ಮೆ ಸೌಲಭ್ಯ ನೀಡಬಾರದು ಎಂದು ಸ್ಪಷ್ಟಪಡಿಸಿದರು.

ನಗರ ವಲಸೆ ತಡೆಗೆ ಹಳ್ಳಿಗಳಲ್ಲೇ ಮೂಲಸೌಕರ್ಯ

ಮಹಾತ್ಮ ಗಾಂಧೀಜಿ ಹೇಳಿದಂತೆ ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧ್ಯ. ತಾವು ಕೂಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಕೆಲಸ ಮಾಡಿದ್ದು, ಸ್ಥಳೀಯ ಸಂಸ್ಥೆಗಳ ಅನುದಾನದ ಕೊರತೆ ಮತ್ತು ಗ್ರಾಮೀಣ ಜನರ ಸಮಸ್ಯೆಗಳ ಅರಿವಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಈಗಾಗಲೇ ಶೇ. 47ರಷ್ಟು ಜನಸಂಖ್ಯೆ ವಲಸೆ ಹೋಗಿದ್ದು, ಮುಂದಿನ ದಿನಗಳಲ್ಲಿ ಇದು ಶೇ. 76ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ರೈತರ ಮಕ್ಕಳು ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಊರು ತೊರೆಯುವುದನ್ನು ತಡೆಯಲು ಹಳ್ಳಿಗಳಲ್ಲೇ ಉತ್ತಮ ರಸ್ತೆ, ನೀರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಗ್ರಾಮೀಣ ಭಾಗದಲ್ಲಿ ಉದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಪಂಚಾಯಿತಿಗಳು ಅನಗತ್ಯ ತೊಂದರೆ ನೀಡಬಾರದು. ಕರಾವಳಿ ಮತ್ತು ಮಲೆನಾಡು ಭಾಗಗಳ ಅಭಿವೃದ್ಧಿಗೂ ವಿಶೇಷ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

2 ಕೋಟಿ ಜನರಿಗೆ ಆಸ್ತಿ ದಾಖಲೆ, 1,000 ಶಾಲೆಗಳ ಮೇಲ್ದರ್ಜೆ

ಭೂ ಗ್ಯಾರಂಟಿ ಯೋಜನೆಯಡಿ ರಾಜ್ಯದ ಸುಮಾರು 2 ಕೋಟಿ ಜನರಿಗೆ ಎ-ಖಾತಾ ಮತ್ತು ಬಿ-ಖಾತಾ ಸೇರಿದಂತೆ ಆಸ್ತಿ ದಾಖಲೆಗಳ ಸಮಸ್ಯೆ ಪರಿಹರಿಸಲು ಅವಕಾಶವಿದೆ. ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಆಸ್ತಿಯ ಅಳತೆ, ಛಾಯಾಚಿತ್ರ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತಾ ನೀಡಬೇಕು. ನಕಲಿ ನೋಂದಣಿಗಳಿಗೆ ಅವಕಾಶ ನೀಡದೆ, ಕಾನೂನುಬಾಹಿರ ದಾಖಲೆಗಳನ್ನು ರದ್ದುಪಡಿಸಬೇಕು. ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರತಿ ಪಂಚಾಯಿತಿಯಲ್ಲೂ ಪ್ರತ್ಯೇಕ ಕೌಂಟರ್ ತೆರೆದು ಅರ್ಜಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ರಾಜ್ಯದ 6 ಸಾವಿರ ಪಂಚಾಯಿತಿಗಳ ಪೈಕಿ ಕನಿಷ್ಠ 3 ಸಾವಿರ ಪಂಚಾಯಿತಿ ಮಟ್ಟದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಗುರಿ ಇದ್ದು, ಮೊದಲ ಹಂತದಲ್ಲಿ 1,000 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಕೈಗಾರಿಕೆಗಳು ಸಿಎಸ್‌ಆರ್ ನೆರವಿನಡಿ ಶಾಲೆಗಳನ್ನು ದತ್ತು ಪಡೆದು ಕಟ್ಟಡ ಮತ್ತು ಮೂಲಸೌಕರ್ಯ ಕಲ್ಪಿಸಬೇಕು. ಶಾಲೆಗಳ ನಿರ್ವಹಣೆಯನ್ನು ಸರ್ಕಾರವೇ ನೋಡಿಕೊಳ್ಳಲಿದೆ ಎಂದು ಮನವಿ ಮಾಡಿದರು.

ಆರ್‌ಒ ಘಟಕಗಳ ದುರಸ್ತಿ ಮತ್ತು ಬರ ಪರಿಹಾರ

ಗ್ರಾಮೀಣ ಭಾಗದಲ್ಲಿ ಹಿಂದೆ ಸ್ವಂತ ಹಣ ಹಾಗೂ ಟ್ರಸ್ಟ್ ಮೂಲಕ 300ಕ್ಕೂ ಹೆಚ್ಚು ಆರ್‌ಒ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿತ್ತು. ಅವುಗಳ ನಿರ್ವಹಣೆ ಸಮರ್ಪಕವಾಗಿಲ್ಲದ ಕಾರಣ, ಕೆಟ್ಟುಹೋಗಿರುವ ಘಟಕಗಳನ್ನು ತಕ್ಷಣ ದುರಸ್ತಿಗೊಳಿಸಬೇಕು ಮತ್ತು ಪ್ರತಿ ತಿಂಗಳು ನೀರಿನ ಗುಣಮಟ್ಟ ಪರೀಕ್ಷಿಸಬೇಕು. ಸಿಇಒ, ಇಒ ಹಾಗೂ ಪಿಡಿಒಗಳು ಈ ಜವಾಬ್ದಾರಿಯನ್ನು ಗಂಭೀರವಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಬರಗಾಲದಿಂದ ರಾಜ್ಯಕ್ಕೆ ಸುಮಾರು 60 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ಕೇಂದ್ರ ಸರ್ಕಾರದ ಬಳಿ 22 ಸಾವಿರ ಕೋಟಿ ರೂಪಾಯಿ ಪರಿಹಾರ ಕೇಳಲಾಗಿದೆ. ರೈತರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವ ನಿರ್ಧಾರ ಕೈಗೊಂಡಿದ್ದು, ಈಗಾಗಲೇ 2,500 ರೂಪಾಯಿ ಬಿಡುಗಡೆ ಮಾಡಲಾಗಿದೆ. ಉಳಿದ ಮೊತ್ತವನ್ನು ಮುಂದಿನ ಹಂತದಲ್ಲಿ ನೀಡಲಾಗುವುದು. ಕೇಂದ್ರದಿಂದ ನ್ಯಾಯಯುತ ಪರಿಹಾರ ಪಡೆಯಲು ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದರು. ಸುಮಾರು 4.5 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ವಿದ್ಯುತ್ ಸಬ್ಸಿಡಿ, ಪಿಂಚಣಿ, ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣ ಸೇರಿದಂತೆ ಎಲ್ಲ ವರ್ಗಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರಾಜಕೀಯ ಒತ್ತಡಕ್ಕೆ ಮಣಿಯದೆ ಕೆಲಸ ಮಾಡಲು ಸೂಚನೆ

ಅಧಿಕಾರಿಗಳು ಯಾರ ಭಯಕ್ಕೂ ಒಳಗಾಗದೆ ಕಾನೂನುಬದ್ಧವಾಗಿ ಕೆಲಸ ಮಾಡಬೇಕು. ಶಾಸಕರು ಅಥವಾ ಸಚಿವರಿಂದ ಅನಗತ್ಯ ರಾಜಕೀಯ ಒತ್ತಡ ಬಂದರೆ ಅದನ್ನು ಗೌಪ್ಯವಾಗಿ ಜಿಲ್ಲಾಧಿಕಾರಿ ಅಥವಾ ಸಿಇಒಗಳ ಮೂಲಕ ಸರ್ಕಾರದ ಗಮನಕ್ಕೆ ತರಬಹುದು. ಸರ್ಕಾರವು ಜಾತಿಗಿಂತ ನೀತಿ, ಪ್ರಾಮಾಣಿಕತೆ ಮತ್ತು ಕೆಲಸದ ಗುಣಮಟ್ಟಕ್ಕೆ ಆದ್ಯತೆ ನೀಡುತ್ತದೆ ಎಂದರು.

ಸಚಿವರು ಪ್ರತಿ ತಿಂಗಳು ಎರಡು ಬಾರಿ ತಾಲೂಕುಗಳಿಗೆ ಭೇಟಿ ನೀಡಬೇಕು ಹಾಗೂ ಶಾಸಕರು ಹೋಬಳಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆ ಆಲಿಸಬೇಕು. ತಾವು ಕೂಡ ಪ್ರತಿ ಶನಿವಾರ ಒಂದೊಂದು ಪ್ರಜಾಸೇವಾ ಕೇಂದ್ರಕ್ಕೆ ಭೇಟಿ ನೀಡಿ ಜನರ ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು.

Tags: 16000 Crore Development Project30x40 Sites for PoorCM DK ShivakumarIllegal Site AllocationKarnataka Development NewsKarnataka Government SchemesKarnataka Infrastructure DevelopmentNews beatRural Development KarnatakaRural Development ProjectsRural Housing Scheme
SendShareTweet
Previous Post

ಮಿಷನ್-60+ ಯಶಸ್ವಿಗೊಳಿಸಿ, ಮಕ್ಕಳಲ್ಲಿ ಸಕಾರಾತ್ಮಕ ಬದಲಾವಣೆ ತನ್ನಿ: ಸಚಿವ ಮಧು ಬಂಗಾರಪ್ಪ

Next Post

ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ, ರೈತರಿಗೆ ತಕ್ಷಣ ಬರ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ ತಾಕೀತು

Related Posts

ಸ್ಟಿಂಗ್
ರಾಜ್ಯ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಬಸವಣ್ಣ
ರಾಜ್ಯ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ಸಂವಿಧಾನ ದಿನಾಚರಣೆ
ಮೈಸೂರು

ಮೈಸೂರಿನಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆ: ಮೆರವಣಿಗೆ ಅರ್ಥಪೂರ್ಣವಾಗಿ ಆಯೋಜಿಸಲು ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಶಿಕ್ಷಕರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ದಿನಾಂಕ ನಿಗದಿ: ಜನವರಿ 18 ರಿಂದ ಸ್ಪರ್ಧಾತ್ಮಕ ಪರೀಕ್ಷೆ ಆರಂಭ

ನಿಗಮ ಮಂಡಳಿ
ರಾಜ್ಯ

ನಿಗಮ ಮಂಡಳಿಗಳಿಗೆ ನೂತನ ಸಾರಥಿಗಳ ನೇಮಕ: ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅಸ್ತು, 18 ಶಾಸಕರು ಮತ್ತು ನಾಯಕರಿಗೆ ಮಹತ್ವದ ಹೊಣೆ

ಬೈರತಿ ಸುರೇಶ್
ರಾಜ್ಯ

ಬೈಕ್ ಟ್ಯಾಕ್ಸಿ ಸೇವೆಗೆ ಕಠಿಣ ನಿಯಮಾವಳಿ: ಅಡ್ವೋಕೇಟ್ ಜನರಲ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ-ಸಚಿವ ಬೈರತಿ ಸುರೇಶ್

Next Post
ರೈತ ಬರ ಪರಿಹಾರ

ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ, ರೈತರಿಗೆ ತಕ್ಷಣ ಬರ ಪರಿಹಾರ ತಲುಪಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ ತಾಕೀತು

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಸ್ಟಿಂಗ್

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಪೊಲೀಸ್ ಕಾನ್‌ಸ್ಟೇಬಲ್

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಬಸವಣ್ಣ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

Recent News

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಸ್ಟಿಂಗ್

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

ಪೊಲೀಸ್ ಕಾನ್‌ಸ್ಟೇಬಲ್

ಪಾನಮತ್ತ ಪೊಲೀಸ್ ಕಾನ್‌ಸ್ಟೇಬಲ್ ಅಟ್ಟಹಾಸ: ಶಾಲೆಯಿಂದ ಮರಳುತ್ತಿದ್ದ 12ರ ಬಾಲಕಿ ಮೇಲೆ ಹರಿದ ಕಾರು; ವಾಹನದಲ್ಲಿ ಮದ್ಯದ ಬಾಟಲಿ ಪತ್ತೆ

ಬಸವಣ್ಣ

ಬಸವಣ್ಣನವರ ಅವಹೇಳನಕ್ಕೆ ವೀರಶೈವ ಪಂಚಪೀಠಗಳ ಜಗದ್ಗುರುಗಳ ತೀವ್ರ ಖಂಡನೆ: ರವಿ ಹಂಜ್‌ಗೆ ನೀಡಿರುವ ಪ್ರಶಸ್ತಿ ವಾಪಸ್ ಪಡೆಯುವಂತೆ ಒತ್ತಾಯ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿಗೆ 2026ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಸ್ಟಿಂಗ್

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಗೆ ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat