ಕೇರಳದ ವಯನಾಡಿನಲ್ಲಿ ಉಂಟಾಗಿದ್ದ ಭೂ ಕುಸಿತಕ್ಕೆ ಇಡೀ ದೇಶವೇ ಮಮ್ಮಲ ಮರುಕ ಪಟ್ಟಿತ್ತು. ಈ ವೇಳೆ ಹಲವರು ಸಹಾಯಹಸ್ತ ಚಾಚಿದ್ದರು. ಅಲ್ಲದೇ, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳು ಸಹಾಯ ಮಾಡುವುದಾಗಿ ಘೋಷಿಸಿದ್ದವು. ಆದರೆ, ಕೇರಳ ಸರ್ಕಾರವೇ ಆಸಕ್ತಿ ತೋರಿಸದ ಹಿನ್ನೆಲೆಯಲ್ಲಿ ಕೇರಳಿಗರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವಯನಾಡಿನಲ್ಲಿ ಉಂಟಾದ ಭೂಕುಸಿತದಲ್ಲಿ ಹಲವರು ಮನೆ-ಮಠ, ಸಂಬಂಧಿಕರನ್ನು ಕಳೆದುಕೊಂಡಿದ್ದರು. ಹೀಗಾಗಿ ಕರ್ನಾಟಕ ಸರ್ಕಾರ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಿಸಿತ್ತು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಕೇರಳದ ಸಿಎಂ ಪಿಣರಾಯಿ ವಿಜಯನ್ ಗೆ ಪತ್ರ ಬರೆದಿದ್ದರು. ಆದರೆ, ಪತ್ರಕ್ಕೆ ಕೇರಳದಿಂದಲೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಅಲ್ಲಿನ ಸರ್ಕಾರದ ನಡೆಗೆ ಕೇರಳಿಗರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಡೆಗೆ ಕೇರಳದ ವಿರೋಧ ಪಕ್ಷವಾದ ಕಾಂಗ್ರೆಸ್ ಸಹ ತನ್ನ ವಿರೋಧವನ್ನು ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ವಿಚಾರವಾಗಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.