ಬೆಂಗಳೂರು: ಕಾನೂನು ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶದ ಬಾಗಿಲು ತೆರೆದಿದೆ. ಕರ್ನಾಟಕ ಹೈಕೋರ್ಟಿನಲ್ಲಿ ಖಾಲಿ ಇರುವ ಎರಡು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಲಾ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳನ್ನು ನೇಮಕಾತಿ (Karnataka High Court Recruitment 2025) ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಈ ಕೆಳಗಿನಂತಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಲಾ ರಿಸರ್ಚ್ ಅಸಿಸ್ಟಂಟ್
ಒಟ್ಟು ಹುದ್ದೆ: 2
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಕಾನೂನು ವಿಷಯದಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಅಧಿಸೂಚನೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ karnatakajudiciary.kar.nic.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ officeofhmjtvg@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು.
ಇದನ್ನೂ ಓದಿ : ಕೇಂದ್ರ ಸರ್ಕಾರದ WAPCOS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ | 2.6 ಲಕ್ಷ ರೂ. ಸ್ಯಾಲರಿ



















