ಬೆಂಗಳೂರು : ನೀವು ಪದವಿ ಕೋರ್ಸ್ ಮುಗಿಸಿ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ (Karnataka High Court Recruitment 2026) ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 20 ಸೆಕೆಂಡ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು: ಸೆಕೆಂಡ್ ಡಿವಿಷನ್ ಕ್ಲರ್ಕ್
ಒಟ್ಟು ಹುದ್ದೆ: 20
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 19
ಸೈನ್ಸ್, ಆರ್ಟ್ಸ್, ಕಾಮರ್ಸ್, ಬಿಸಿನೆಸ್ ಮ್ಯಾನೇಜ್ ಮೆಂಟ್, ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗದಲ್ಲಿ ಪದವಿ ಪಾಸಾದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25,500 – 81,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1, ವಿಶೇಷ ಚೇತನರಿಗೆ 200 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 350 ರೂಪಾಯಿ ಶುಲ್ಕವಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ judiciary.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ನೇಮಕಾತಿಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ : ಫ್ರೆಶರ್‌ಗಳಿಗೆ ಶುಭ ಸಮಾಚಾರ : ಭಾರತೀಯ ನೌಕಾಪಡೆಯಲ್ಲಿ 50 ಹುದ್ದೆಗಳ ನೇಮಕಾತಿ



















