ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಕರ್ನಾಟಕದ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ (Karnataka Higher Education Department Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಹಲವು ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ನಿರ್ದೇಶಕರು
ಅರ್ಜಿ ಸಲ್ಲಿಕೆ ವಿಧಾನ: ಇ-ಮೇಲ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 30
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಮುಗಿಸಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 60 ದಾಟಿರಬಾರದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ hed.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳನ್ನು dsuniversities@gmail.com ಗೆ ಮೇಲ್ ಮಾಡಬೇಕು
ಇದನ್ನೂ ಓದಿ : ನೀವು ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಹೂಡಿಕೆ ಮಾಡಿದರೆ 64 ಸಾವಿರ ರೂ. ಬಡ್ಡಿ ಆದಾಯ


















