ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡೆಮಿಯ ವತಿಯಿಂದ ಚಿತ್ರಕಲೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು (Karnataka Lalithakala Academy Scholarship) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಮ್ಮೆ ಮಾತ್ರ ವಿದ್ಯಾರ್ಥಿ ವೇತನವನ್ನು (One Time Scholorship) ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ವಿದ್ಯಾಲಯಗಳಲ್ಲಿ ಚಿತ್ರಕಲಾ ಶಿಕ್ಷಣಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಬಿ.ಎಫ್.ಎ ಅಥವಾ ಎಂ.ಎಫ್.ಎ ವ್ಯಾಸಂಗ ಮಾಡುತ್ತಿರುವ ಚಿತ್ರಕಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಅರ್ಜಿದಾರರು ಕರ್ನಾಟಕದವರಾಗಿದ್ದು, ತಮ್ಮ ಪೂರ್ಣ ವಿವರಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರ ಹಾಗೂ 56 ಅಳತೆಯ 02 ಚಿತ್ರ ಕಲಾಕೃತಿಗಳ ಛಾಯಾಚಿತ್ರಗಳು ಸೇರಿದಂತೆ ಈ ಹಿಂದೆ ವಿದ್ಯಾರ್ಥಿ ವೇತನ ಪಡೆದಿಲ್ಲವೆಂದು ಸಂಬಂಧಪಟ್ಟ ಕಲಾ ವಿದ್ಯಾಲಯದ ಮುಖ್ಯಸ್ಥರು / ಪ್ರಾಚಾರ್ಯರ ದೃಢೀಕರಣದೊಂದಿಗೆ ಅರ್ಜಿ ಸಲ್ಲಿಸಬಹುದು. ಆಫ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
ರಿಜಿಸ್ಟ್ರಾರ್, ಕರ್ನಾಟಕ ಲಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002
(ಸೂಚನೆ- ಕೊನೆಯ ದಿನಾಂಕದ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ)
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ
ವೆಬ್ ಸೈಟ್:ಳ https://lalitkala.karnataka.gov.in
ಇ-ಮೇಲ್: kla.karnataka@gmail.com
ದೂರವಾಣಿ ಸಂಖ್ಯೆ : 080 2248027
ಇದನ್ನೂ ಓದಿ : ರೆನಾಲ್ಟ್ ಡಸ್ಟರ್ : 1 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮೈಲೇಜ್ ಅಧಿಕೃತವಾಗಿ ಬಹಿರಂಗ



















