ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಚರ್ಚಿಸಿ ಮೂರು ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಜೂನ್ ವೇಳೆಗೆ ಈ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, ಈಶಾನ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಮಾಡಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಬಿಜೆಪಿ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳು
- ಈಶಾನ್ಯ ಶಿಕ್ಷಕರ ಕ್ಷೇತ್ರ: ಶಶೀಲ್ ಜಿ. ನಮೋಶಿ
- ಪಶ್ಚಿಮ ಪದವೀಧರರ ಕ್ಷೇತ್ರ: ಎಸ್.ವಿ. ಸಂಕನೂರು
- ಆಗ್ನೇಯ ಪದವೀಧರರ ಕ್ಷೇತ್ರ: ಕೆ.ಎಂ. ಸುರೇಶ್

ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ಈ ಬಾರಿ ಅನುಭವಿ ನಾಯಕರನ್ನೇ ಕಣಕ್ಕಿಳಿಸಿದೆ. ಈ ಮೂಲಕ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಪಕ್ಷವು ತನ್ನ ರಣತಂತ್ರವನ್ನು ಆರಂಭಿಸಿದಂತಾಗಿದೆ. ಮೂರು ತಿಂಗಳು ಅಗತ್ಯ ಕಾರ್ಯತಂತ್ರ ರೂಪಿಸಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದೆ ಎನ್ನಲಾಗಿದೆ.
ಇದನ್ನೂ ಓದಿ : ಇರಾನ್ನಲ್ಲಿ 165 ಶಾಲಾ ಬಾಲಕಿಯರ ಸಾವಿಗೆ AI ಕಾರಣವೇ? ಯುದ್ಧ ಭೂಮಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಸಾಧುವೇ?



















