ಬೆಂಗಳೂರು: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು 2025ನೇ ಸಾಲಿನಲ್ಲಿ ಭರ್ಜರಿ ವಿದ್ಯಾರ್ಥಿವೇತನ ಘೋಷಣೆ ಮಾಡಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳು, ಅಲ್ಪಸಂಖ್ಯಾತ ಸಮುದಾಯಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ (Karnataka Social Welfare Department Scholarship 2025) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯಾರಿಗೆ ಎಷ್ಟು ವಿದ್ಯಾರ್ಥಿ ವೇತನ?
• ಒಂದರಿಂದ 10ನೇ ತರಗತಿ ಓದುತ್ತಿರುವ ಎಸ್ಸಿ, ಎಸ್ಟಿ ಸಮುದಾಯಗಳ ವಿದ್ಯಾರ್ಥಿಗಳಿಗೆ 1,500-3,000 ರೂಪಾಯಿ
• ಪಿ ಯುಸಿ, ಡಿಪ್ಲೊಮಾ, ಡಿಗ್ರಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 3ರಿಂದ 10 ಸಾವಿರ ರೂ. (2.5 ಲಕ್ಷ ರೂ.ಗಿಂತ ಕಡಿಮೆ ಆದಾಯದವರು)
• ಆಡಳಿತ ಮಂಡಳಿ ಕೋಟಾದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ 5ರಿಂದ 15 ಸಾವಿರ ರೂಪಾಯಿ.
• ವಸತಿ ನಿಲಯದಲ್ಲಿ ಇರುವ ಎಂಬಿಬಿಎಸ್, ಬಿಎಎಂಎಸ್, ಬಿ.ಇ, ಬಿ.ಟೆಕ್ ವಿದ್ಯಾರ್ಥಿಗಳಿಗೆ 1,500-3,000 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅರ್ಹತೆಗಳು ಏನೇನು?
ಅರ್ಜಿ ಸಲ್ಲಿಸುವವರಿಗೆ ಹಲವು ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಎರಡೂವರೆ ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು. ಸರ್ಕಾರಿ ಅಥವಾ ಅನುದಾನಿತ ಶಾಲೆ ಅಥವಾ ಕಾಲೇಜಿನಲ್ಲಿ ಓದುತ್ತಿರಬೇಕು. ಜಾತಿ ಪ್ರಮಾಣಪತ್ರ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು https://ssp.postmatric.karnataka.gov.in/CA/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ, ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು 2026ರ ಜನವರಿ 15 ಕೊನೆಯ ದಿನವಾಗಿದೆ. ಪಾಸ್ ಪೋರ್ಟ್ ಸೈಜ್ ಫೋಟೊ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಶೈಕ್ಷಣಿಕ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಬ್ಯಾಂಕ್ ಆಫ್ ಬರೋಡಾದಲ್ಲಿ ಭರ್ಜರಿ 2,700 ಹುದ್ದೆಗಳ ನೇಮಕಾತಿ : ಫ್ರೆಶರ್ ಗಳಿಗೆ ಗುಡ್ ನ್ಯೂಸ್



















