ಸಾರಿಗೆ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ, ಎಸ್ಮಾ ಕಾಯ್ದೆ ಜಾರಿ ಮಾಡಿದ ನೌಕರರನ್ನು ಮತ್ತೆ ಸೇರ್ಪಡೆ ಮಾಡಿಕೊಳ್ಳುವುದನ್ನು ಸೇರಿದಂತೆ ಇನ್ನಿತರೆ ಬೇಡಿಕೆಗಳ ಈಡೇರಿಕೆ ಕುರಿತು ಸರಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಜು.7ರಂದು ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ, ಮುಂದಿನ ಒಂದು ವಾರದೊಳಗೆ ಸಭೆ ಕರೆಯುವುದಾಗಿ ಭರವಸೆ ನೀಡಿದ್ದರು. ಇದಾಗಿ 11 ದಿನ ಕಳೆದರೂ ಸಭೆ ಕರೆದಿಲ್ಲ. ಹೀಗಾಗಿ, ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಆಗಸ್ಟ್ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟ ಸಾರಿಗೆ ನೌಕರರು, ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದಿಂದ ಪತ್ರಿಕಾ ಗೋಷ್ಟಿ ಕರೆಯಲಾಗಿದೆ.



















