ಕಾರವಾರ: ಶಾಲೆಯ ಬಿಸಿಯೂಟ ಸೇವಿಸಿ 22 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಮಾದರಿ ಶಾಲೆಯಲ್ಲಿ ನಡೆದಿದೆ.
ಎಂದಿನಂತೆ ಶುಕ್ರವಾರ ಮಧ್ಯಾಹ್ನ ಶಾಲೆಯಲ್ಲಿ400 ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ ತಾಲೂಕಾಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪಿಐ ರಂಗನಾಥ್ ಸೇರಿ ಹಲವು ಅಧಿಕಾರಿಗಳ ತಂಡ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಾಸ್ಪತ್ರೆಯ ವೈದ್ಯರ ತಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಒಂದು ದಿನದ ನಿಗಾದಲ್ಲಿ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯಿಂದಲೂ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ ಆಗುತ್ತೆ | ಸಚಿವ ಮಧು ಬಂಗಾರಪ್ಪ



















