ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಭೀಮನಗುಡ್ಡ ಸಮೀಪದ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಟ್ಟದ ಸುತ್ತಮುತ್ತ ಹೊಗೆ ಆವರಿಸಿಕೊಂಡ ದೃಶ್ಯ ಕಂಡುಬಂದಿದೆ.
ಭೀಮನಗುಡ್ಡದ ಸುತ್ತಲೂ ಶಾಲಾ–ಕಾಲೇಜುಗಳು ಹಾಗೂ ಮನೆಗಳು ಇರುವುದರಿಂದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬೆಚ್ಚಿಬೀಳುವಂತಾಯಿತು.
ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ಮುಂದುವರಿದಿದೆ.
ಇದನ್ನೂ ಓದಿ : ಬೆಂಗಳೂರು | ಮಹಿಳೆಯ ಕೊಲೆಗೈದು ಬಳಿಕ ಆತ್ಮಕತ್ಯೆಗೆ ಶರಣಾದ ಹಂತಕ



















