ಬೆಂಗಳೂರು: ಕರ್ನಾಟಕದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ದೊರೆತಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿ ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2025) ಗುಡ್ ನ್ಯೂಸ್ ನೀಡಿದೆ. ಹೌದು, ಎಸ್ ಡಿ ಎ ಹಾಗೂ ಎಫ್ ಡಿ ಎ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕೆಇಎ ತೀರ್ಮಾನಿಸಿದೆ.
“ಹುದ್ದೆಗಳ ವಿವರ”
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಹುದ್ದೆಗಳ ಹೆಸರು: SDA, FDA
ಒಟ್ಟು ಹುದ್ದೆಗಳು: 722
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಒಟ್ಟು 722 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಕೆಇಎ ತೀರ್ಮಾನಿಸಿದೆ. ಹೈದರಾಬಾದ್ ಕರ್ನಾಟಕ ವಿಭಾಗದಲ್ಲಿ 328 (HK) ಹಾಗೂ ಹೈದರಾಬಾದ್ ಕರ್ನಾಟಕ ಹೊರತಾದ ಭಾಗದಲ್ಲಿ (Non HK) 394 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ, ಕೊನೆಯ ದಿನಾಂಕ ಸೇರಿ ವಿವಿಧ ಮಾಹಿತಿ ಇರುವ ಅಧಿಸೂಚನೆಯನ್ನು ಹೊರಡಿಸಲಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು. ಕನಿಷ್ಠ 18 ಮತ್ತು ಗರಿಷ್ಠ 43 ವರ್ಷ ವಯೋಮಿತಿ ಹೊಂದಿರಬೇಕು. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 18,660-1,12,900 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆ ಹೊರಡಿಸಿದ ಬಳಿಕ https://cetonline.karnataka.gov.in/kea/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.