ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು. ಅದರಲ್ಲೂ ಬೆಂಗಳೂರಿನಲ್ಲೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ (KEA Recruitment 2026) ಖಾಲಿ ಇರುವ 19 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 19 ಸೆಕ್ಷನ್ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಖಾಲಿ ಇರುವ ಹುದ್ದೆಗಳು: 19
ಹುದ್ದೆಗಳ ಹೆಸರು: ಸೆಕ್ಷನ್ ಆಫೀಸರ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 15
2ಎ, 2ಬಿ, 3ಎ, 3ಬಿ ಸಮುದಾದಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ, ಎಲ್ ಎಲ್ ಬಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 18ರಿಂದ 40 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 69,250 ರೂಪಾಯಿಯಿಂದ 1.34 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cetonline.karnataka.gov.in ಗೆ ಭೇಟಿ ನೀಡಬೇಕು
ಸೆಕ್ಷನ್ ಆಫೀಸರ್ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ ; ಉಡುಪಿ : ಯಮರೂಪಿಯಾಗಿ ಬಂದ ಬಸ್ ಸ್ಕೂಟಿಗೆ ಡಿಕ್ಕಿ.. 8 ವರ್ಷದ ಬಾಲಕಿ ಸಾವು!



















