ಬೆಂಗಳೂರು : ಕರ್ನಾಟಕ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಕನಸು ಕಾಣುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. 233 ಫಾರ್ಮಸಿ ಆಫೀಸರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2026) ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 233
ಹುದ್ದೆಗಳ ಹೆಸರು: ಫಾರ್ಮಸಿ ಆಫೀಸರ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 30
ಕಲ್ಯಾಣ ಕರ್ನಾಟಕ ಭಾಗದಲ್ಲಿ 11 ಫಾರ್ಮಸಿ ಆಫೀಸರ್, 34 ನರ್ಸಿಂಗ್ ಆಫೀಸರ್, ಉಳಿದ ಭಾಗಗಳಲ್ಲಿ 98 ಫಾರ್ಮಸಿ ಆಫೀಸರ್ ಹಾಗೂ 90 ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಎಸ್ಸಿ, ನರ್ಸಿಂಗ್ ನಲ್ಲಿ ಡಿಪ್ಲೋಮಾ ಮುಗಿಸಿರಬೇಕು ಎಂದು ತಿಳಿಸಲಾಗಿದೆ.
ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ವಿಶೇಷ ಚೇತನರಿಗೆ 250 ರೂ. ಹಾಗೂ ಉಳಿದ ಎಲ್ಲ ಸಮುದಾಯದವರಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 44,425 – 99,400 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು cetonline.karnataka.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ


















