ಬೆಂಗಳೂರು: ಕರ್ನಾಟಕ ಸರ್ಕಾರದ ಹುದ್ದೆ ಪಡೆಯಬೇಕು ಎಂದು ಕನಸು ಕಾಣುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. 415 ಅಸಿಸ್ಟಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Recruitment 2026) ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 415
ಹುದ್ದೆಗಳ ಹೆಸರು: ಅಸಿಸ್ಟಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಇತ್ಯಾದಿ
ಉದ್ಯೋಗ ಸ್ಥಳ: ಕರ್ನಾಟಕದಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 15
268 ಅಸಿಸ್ಟಂಟ್ ಪಬ್ಲಿಕ್ ಪ್ರಾಸಿಕ್ಯೂಟರ್, 52 ಅಸಿಸ್ಟಂಟ್ ಪಬ್ಲಿಕ್ ಪ್ಲೀಡರ್, 22 ಟೆಕ್ಸ್ ಟೈಲ್ ಇನ್ ಸ್ಪೆಕ್ಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 32 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಡಿಪ್ಲೋಮಾ, ಬಿ.ಇ, ಬಿ.ಟೆಕ್, ಎಲ್.ಎಲ್.ಬಿ, ಬಿಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ತಿಳಿಸಲಾಗಿದೆ.
ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ವಿಶೇಷ ಚೇತನರಿಗೆ 250 ರೂ. ಹಾಗೂ ಉಳಿದ ಎಲ್ಲ ಸಮುದಾಯದವರಿಗೆ 750 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ವೈವಾ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.34 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು cetonline.karnataka.gov.in ಗೆ ಭೇಟಿ ನೀಡಬಹುದು.



















